Thursday, November 19, 2026
HomeBelagaviಮೂವರು ಸಾಧಕರಿಗೆ ಉಡುಪಿ ಭಂಡಾರಕೇರಿ ಮಠದ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

ಮೂವರು ಸಾಧಕರಿಗೆ ಉಡುಪಿ ಭಂಡಾರಕೇರಿ ಮಠದ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

ಬೆಳಗಾವಿ
ಉಡುಪಿ ಶ್ರೀ ಭಂಡಾರಕೇರಿ ಮಠದ ಪ್ರತಿಷ್ಠಿತ ವಾರ್ಷಿಕ ರಾಷ್ಟ್ರೀಯ ಪ್ರಶಸ್ತಿಯನ್ನು ಮೈಸೂರು ವಿವಿಯ ಪ್ರಾಚ್ಯವಿದ್ಯಾ ಸಂಶೋಧನಾಲಯ ( ಓಆರ್‌ಐ) ಸೇರಿದಂತೆ ಮೂವರು ವಿದ್ವಾಂಸರಿಗೆ ಪ್ರದಾನ ಮಾಡಲಾಯಿತು.
ಬೆಳಗಾವಿಯ ವೇಣುಗೋಪಾಲ ಸಭಾಂಗಣದಲ್ಲಿ ಶ್ರೀ ಮಠ, ಶ್ರೀ ಮಾಧ್ವ ರಾದ್ಧಾಂತ ಸಂವರ್ಧಕಸಭಾ 82ನೇ ಅಧಿವೇಶನ, ಶ್ರೀ ವೇದವ್ಯಾಸ ಜಯಂತಿ ಮತ್ತು ಶ್ರೀ ವಿದ್ಯಾಮಾನ್ಯ ತೀರ್ಥರ 25ನೇ ಆರಾಧನೋತ್ಸವ ನಿಮಿತ್ತ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಗಣ್ಯರಿಗೆ ಗೌರವಾರ್ಪಣೆ ಮಾಡಲಾಯಿತು. ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ , ಭಂಡಾರಕೇರಿ ಮಠಾಧೀಶರಾದ ಶ್ರೀ ವಿದ್ಯೇಶತೀರ್ಥ ಸ್ವಾಮೀಜಿ ಅವರು ಮೈಸೂರಿನ ಪ್ರಾಚ್ಯವಿದ್ಯಾ ಸಂಶೋಧನಾಲಯದ ನಿರ್ದೇಶಕ ಡಾ. ಡಿ.ಪಿ. ಮಧುಸೂದನಾಚಾರ್ಯರಿಗೆ ವೇದಪೀಠ ಪ್ರಶಸ್ತಿ (1 ಲಕ್ಷ ರೂ. ನಗದು, ಸನ್ಮಾನಪತ್ರ, ಸ್ಮರಣಿಕೆ) ಪ್ರದಾನ ಮಾಡಿದರು. ಬೆಂಗಳೂರಿನ ಪೂರ್ಣಪ್ರಜ್ಞ ವಿದ್ಯಾಪೀಠದ ಹಿರಿಯ ಪ್ರಾಧ್ಯಾಪಕ ವೆಂಕಟೇಶ ಬಾಯರಿ ಅವರಿಗೆ ‘ಶ್ರೀಸತ್ಯತೀರ್ಥ ಅನುಗ್ರಹ’ ಪ್ರಶಸ್ತಿ , ಬೆಳಗಾವಿಯ ವಿಶ್ವ ಮಧ್ವ ಮಹಾಪರಿಷತ್ ಸಂಚಾಲಕ ಪಂಡಿತ ಕಟ್ಟಿ ಪ್ರಮೋದಾಚಾರ್ಯಗೆ ‘ಶ್ರೀ ರಾಜವಿದ್ಯಾಮಾನ್ಯ’ ಪ್ರಶಸ್ತಿ ಮತ್ತು ಮಂತ್ರಾಲಯದ ಗುರು ಸಾರ್ವಭೌಮ ಸಂಸ್ಕೃತ ವಿದ್ಯಾಪೀಠದ ಯುವ ವಿದ್ವಾಂಸ ಶಶಿಧರ ಆಚಾರ್ಯರಿಗೆ ‘ಶ್ರೀ ರಾಜಹಂಸ ಪ್ರಶಸ್ತಿ’ (ಈ ಮೂರೂ ಪ್ರಶಸ್ತಿ ತಲಾ 50 ಸಾವಿರ ರೂ. ನಗದು, ಸ್ಮರಣಿ) ನೀಡಲಾಯಿತು.
ಹಿರಿಯ ಪ್ರವಚನಕಾರ ಡಾ. ವ್ಯಾಸನಕೆರೆ ಪ್ರಭಂಜನಾಚಾರ್ಯ, ಪಂಡಿತರಾದ ಗುರುರಾಜಾಚಾರ್ಯ ಜೋಷಿ, ಶ್ರೀನಿವಾಸಾಚಾರ್ಯ ಹೊನ್ನಿದಿಬ್ಬ, ವಿದುಷಿ ಶುಭಾ ಸಂತೋಷ, ಪಂಡಿತ ಬದರೀನಾಥಾಚಾರ್ಯ, ಶ್ರೀನಿಧಿ ವಾಸಿಷ್ಠ , ರಮೇಶ ಇತರರು ಸಾಕ್ಷಿಯಾದರು. ಇದೇ ಸಂದರ್ಭ ಶ್ರೀ ವೇದವ್ಯಾಸರ ಗ್ರಂಥಗಳಿಗೆ ನಾಣ್ಯ ತುಲಾಭಾರ ಮಾಡಿದ ಶ್ರೀ ವಿದ್ಯೇಶತೀರ್ಥ ಸ್ವಾಮೀಜಿ, ಭಕ್ತರಿಗೆ ಫಲ ಮಂತ್ರಾಕ್ಷತೆ ಸಹಿತ ನಾಣ್ಯಗಳನ್ನೂ ನೀಡಿದ್ದು ವಿಶೇಷವಾಗಿತ್ತು.

ಬೆಳಗಾವಿಯಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಮೈಸೂರು ವಿವಿಯ ಪ್ರಾಚ್ಯವಿದ್ಯಾ ಸಂಶೋಧನಾಲಯಕ್ಕೆ ಉಡುಪಿ ಶ್ರೀ ಭಂಡಾರಕೇರಿ ಮಠದ ಪ್ರತಿಷ್ಠಿತ ವಾರ್ಷಿಕ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸಂಸ್ಥೆ ನಿರ್ದೇಶಕ ಡಾ. ಡಿ.ಪಿ. ಮಧುಸೂದನಾಚಾರ್ಯ ಪ್ರಶಸ್ತಿ ಸ್ವೀಕರಿಸಿದರು. ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ, ಭಂಡಾರಕೇರಿ ಮಠದ ಶ್ರೀ ವಿದ್ಯೇಶತೀರ್ಥ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.

Total Views 30
RELATED ARTICLES

Most Popular

Recent Comments

KNN City News
Home
E-Paper