Monday, November 23, 2026
HomeBelagaviಕಾಳ ಸಂತೆಯಲ್ಲಿ ಅನ್ನ ಭಾಗ್ಯ ಅಕ್ಕಿ ಮಾರಾಟ

ಕಾಳ ಸಂತೆಯಲ್ಲಿ ಅನ್ನ ಭಾಗ್ಯ ಅಕ್ಕಿ ಮಾರಾಟ

ಬೆಳಗಾವಿ
ಬಡವರ ಹೊಟ್ಟೆ ತುಂಬಬೇಕಿದ್ದ ಅನ್ನ ಭಾಗ್ಯ ಯೋಜನೆಗೆ ಖದೀಮರು ಮನೆ ಮನೆಗೆ ಹೋಗಿ ಸಂಗ್ರಹ ಮಾಡಿ ಕಾಳ ಸಂತೆಯಲ್ಲಿ ಮಾರಾಟ ಮಾಡುತ್ತಿದ್ದರೂ ಆಹಾರ ಇಲಾಖೆ ಕಣ್ಣು ಮುಚ್ಚಿ ಕುಳಿತಿರುವುದಕ್ಕೆ ಜನರು ಹಿಡಿ ಶಾಪ ಹಾಕುತ್ತಿದ್ದಾರೆ‌.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕನಸ್ಸಿನ ಯೋಜನೆಗೆ ಜಿಲ್ಲಾಧಿಕಾರಿ ಕಚೇರಿಯ ಕೆಳಭಾಗದಲ್ಲಿ ಇರುವ ಆಹಾರ ಇಲಾಖೆ ಸರಿಯಾಗಿ ಕೆಲಸ ಮಾಡದೆ ಇರುವುದಕ್ಕೆ ಪಡಿತದಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಳಗಾವಿ ತಾಲೂಕಿನ ಪೀರನವಾಡಿ ಗ್ರಾಮದ ಗೋದಾಮಿನಲ್ಲಿ ಮನೆ ಮನೆಯಿಂದ ಸಂಗ್ರಹ ಮಾಡಿದ್ದ ಕಾಳ ಸಂತೆಯ ಅಕ್ಕಿಯನ್ನು ಸಂಗ್ರಹ ಮಾಡಿ ಮಾರಾಟ ಮಾಡುತ್ತಿದ್ದರು.
250 ಅಧಿಕ ಮೂಟೆಗಳನ್ನು ಸಂಗ್ರಹಿಸಿ ಇಟ್ಟಿದ್ದ ಅಕ್ಕಿಯನ್ನು ಕಾಳ ಸಂತೆಯಲ್ಲಿ ಮಾರಾಟ ಮಾಡುವಾಗ ಗ್ರಾಮೀಣ ಪೊಲೀಸರು ದಾಳಿ ಮಾಡಿದ್ದಾರೆ‌. ಎಷ್ಟು ಅಕ್ಕಿ ಏನು, ಎಷ್ಟು ಜನರ ಬಂಧನವಾಗಿದೆ. ಎಂಬುದು ತಿಳಿದು ಬರಬೇಕಿದೆ‌.

Total Views 121
RELATED ARTICLES

Most Popular

Recent Comments

KNN City News
Home
E-Paper