
ಬೆಳಗಾವಿ
ಬೆಳಗಾವಿ ನಗರದಲ್ಲಿ ರಸ್ತೆ ಸುರಕ್ಷತೆ, ಮಹಿಳೆಯರು, ಮಕ್ಕಳ ರಕ್ಷಣೆ ಮಾಡುವುದರ ಜೊತೆಗೆ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪ್ರಮುಖ ಆದ್ಯತೆ ಕೊಡಲಾಗುವುದು ಎಂದು ನೂತನ ನಗರ ಪೊಲೀಸ್ ಆಯುಕ್ತ ಭೂಷಣ್ ಗುಲಾಬ್ ರಾವ್ ಬೊರಸೆ ಹೇಳಿದರು.
ಶುಕ್ರವಾರ ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಅಧಿಕಾರ ಸ್ವೀಕಾರ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಕಳೆದ 16 ವರ್ಷದಿಂದ ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡಿದ ಅನುಭವ ಇದೆ. ಬೆಳಗಾವಿಯಲ್ಲಿ ಕೆಲಸ ಮಾಡಬೇಕೆಂಬ ಆಸೆ ಇತ್ತು. ಬೆಳಗಾವಿ ನಗರದ ಶಾಂತ ಸ್ವಭಾವದ್ದಾಗಿದೆ. ಇಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದರೆ ಮುಲ್ಲಾಜಿಲ್ಲದೆ ಕಿಡಿಗೇಡಿಗಳ ಮೇಲೆ ಕ್ರಮ ಜರುಗಿಸಲಾಗುವುದು ಎಂದರು.
ಬೆಳಗಾವಿಯ ಜನರು ಪೊಲೀಸರಿಗೆ ಸಹಕಾರ ನೀಡಬೇಕು. ನಗರ ಪೊಲೀಸ್ ಇಲಾಖೆಯಲ್ಲಿ ಜನಸ್ನೇಹಿ ಪೊಲೀಸ್ ಆಡಳಿತ ನಡೆಸುವಲ್ಲಿ ಒತ್ತು ನೀಡಲಾಗುವುದು ಎಂದರು.
ಡಿಸಿಪಿಗಳಾದ ರೋಹನ್ ಜಗದೀಸ್ ನಿರಂಜನರಾಜೆ ಅರಸ ಇದ್ದರು.
