
ಬೆಳಗಾವಿ
ಧಾರವಾಡ ಜಿಪಂ ಸದಸ್ಯ ಯೋಗೇಶಗೌಡ ಕೊಲೆ ಪ್ರಕರಣದ ಸಾಕ್ಷ್ಯ ನಾಶ ಮಾಡಿರುವ ಆರೋಪಕ್ಕೆ ಸಂಬಂಧಿಸಿದ ಸುಪ್ರೀಂ ಕೋರ್ಟ್ ನಲ್ಲಿ ಶಾಸಕ ವಿನಯ ಕುಲಕರ್ಣಿಗೆ ಜಾಮೀನು ರದ್ದಾದ ಹಿನ್ನೆಲೆಯಲ್ಲಿ ಬೆಳಗಾವಿ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಧಾರವಾಡ ಅಧಿಕಾರಿಗಳ ಸಭೆ ನಡೆಸಿದರು.
ಧಾರವಾಡ ಗ್ರಾಮೀಣ ಪ್ರದೇಶದ ರಸ್ತೆಗಳು ಸಂಪೂರ್ಣ ಹಾಳಾಗಿದ್ದು ಅವುಗಳನ್ನು ಸುಧಾರಣೆ ಮಾಡುವಂತೆ ಶಾಸಕ ವಿನಯ ಕುಲಕರ್ಣಿ ಅಧಿಕಾರಿಗಳಿಗೆ ಸೂಚಿಸಿದರು.
ಮಳೆಗಾಲ ಆರಂಭವಾಗಿರುವುದರಿಂದ ಜನರಿಗೆ ಯಾವುದೇ ರೀತಿಯ ಸಮಸ್ಯೆಯಾಗಬಾರದು. ಅಗತ್ಯ ಅನುದಾನದ ಬೇಕಿದ್ದರೇ ಮುಖ್ಯಮಂತ್ರಿಗಳಿಂದ ವಿಶೇಷ ಅನುದಾನ ಕೊಡಿಸಲಾಗುವುದು ಎಂದರು.
ಧಾರವಾಡ ಗ್ರಾಮೀಣ ಮತಕ್ಷೇತ್ರದ ಕವಲಗೇರಿ ಗ್ರಾಮದಲ್ಲಿ ರಸ್ತೆಗಳು ಸಂಪೂರ್ಣ ಹಾಳಾಗಿವೆ. ಅವುಗಳ ದುರಸ್ಥಿ ಮಾಡಬೇಕು ಎಂದು ಸೂಚನೆ ನೀಡಿದರು.
ಧಾರವಾಡ ಜಿಲ್ಲಾಧಿಕಾರಿ ದಿವ್ಯಾ ಪ್ರಭು, ವಿನಯ ಕುಲಕರ್ಣಿ ಪತ್ನಿ ಶಿವಲೀಲಾ ಕುಲಕರ್ಣಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
