Monday, November 23, 2026
HomeBelagaviಆಟವಾಡುವಾಗ ಹೃದಯಾಘಾತ: ಬಾಲಕಿ ದಾರುಣ ಸಾವು

ಆಟವಾಡುವಾಗ ಹೃದಯಾಘಾತ: ಬಾಲಕಿ ದಾರುಣ ಸಾವು

ಬೆಳಗಾವಿ
ಶಾಲೆಯಲ್ಲಿ ಆಟವಾಡುವ ವೇಳೆ ಹೃದಯಾಘಾತ ಸಂಭವಿಸಿ ಬಾಲಕಿ ಮೃತಪಟ್ಟ ಘಟನೆ ಮಂಗಳವಾರ ಅಥಣಿ ತಾಲೂಕಿನ ಚಮಕೇರಿ ಗ್ರಾಮದಲ್ಲಿ ನಡೆದಿದೆ.
ಅಥಣಿ ತಾಲೂಕಿನ ಬೇಡರಹಟ್ಟಿ ಗ್ರಾಮದ ವಿದ್ಯಾರ್ಥಿನಿಗೆ ರೇಣುಕಾ ಸಂಜಯ ಬಂಡಗಾರ (15) ಮೃತ ದುರ್ದೈವಿ. ‌ಚಮಕೇರಿ ಗ್ರಾಮದ ಖಾಸಗಿ ಶಾಲೆಯಲ್ಲಿ 9 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಗೆ ಆಟವಾಡುವ ವೇಳೆ ಹೃದಯಾಘಾತ ಸಂಭವಿಸಿದೆ. ಕೂಡಲೇ ಶಿಕ್ಷಕರು ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ದಾಖಲಿಸಿದರು ಚಿಕಿತ್ಸೆ ಫಲಕಾರಿಯಾಗದೆ ವಿದ್ಯಾರ್ಥಿನಿ ಕೊನೆಯುಸಿರೆಳೆದಿದ್ದಾಳೆ. ಅಥಣಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿದ್ದು, ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.

Total Views 59
RELATED ARTICLES

Most Popular

Recent Comments

KNN City News
Home
E-Paper