
ಬೆಳಗಾವಿ
ಹುಕ್ಕೇರಿ ತಾಲೂಕಿನ ಇಂಗಳಿ ಗ್ರಾಮದಲ್ಲಿ ಶ್ರೀರಾಮ ಸೇನೆ ಕಾರ್ಯಕರ್ತರ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ಮಾಡದೇ ಬಿಟ್ಟು ಕಳ್ಸಿ ನಿರ್ಲಕ್ಷ್ಯ ತೋರಿದ ಪಿಎಸ್ಐ ನಿಖಿಲ್ ಕಾಂಬ್ಳೆ ಅಮಾನತು ಮಾಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ್ ಆದೇಶ ಹೊರಡಿಸಿದ್ದಾರೆ.
ಕಳೆದ ಜೂ. 26ರಂದು ಗೋವು ಸಾಗಿಸುತ್ತಿದ್ದ ವಾಹನ ಹಿಡಿದು ಠಾಣೆಗೆ ತಂದಿದ್ದ ಶ್ರೀರಾಮ ಸೇನೆ ಕಾರ್ಯಕರ್ತರು. ಈ ವೇಳೆ ಕೇಸ್ ದಾಖಲಿಸದೇ ಬಿಟ್ಟು ಕಳ್ಸಿದ್ದ ಪಿಎಸ್‌ಐ ನಿಖಿಲ್ ಮೇಲಾಧಿಕಾರಿಗಳ ಗಮನಕ್ಕೆ ತರದೇ ಬೇಜವಾಬ್ದಾರಿ ಮೆರೆದಿದ್ದರು. ಗಡಿಪಾರಾದ ರೌಡಿ ಶೀಟರ್ ಶ್ರೀರಾಮ ಸೇನೆ ಕಾರ್ಯಕರ್ತ ಮಹಾವೀರ್ ಸೊಲ್ಲಾಪುರೆಯನ್ನ ಕೂಡ ಬಿಟ್ಟು ಕಳ್ಸಿದ್ದ ಪಿಎಸ್‌ಐ ನಿಖಿಲ್ ಎಲ್ಲ ಅಂಶಗಳನ್ನ ಪರಿಗಣಿಸಿ ಅಮಾನತು ಮಾಡಿ ಗುಳೇದ್ ಆದೇಶ ಹೊರಡಿಸಿದ್ದಾರೆ.
ಜುಲೈ 3ರಂದು ಇಂಗಳಿ ಚಲೋ ಕರೆ ಕೊಟ್ಟಿರುವ ಶ್ರೀರಾಮ ಸೇನೆ ಸಂಘಟನೆಯ ಹಿನ್ನೆಲೆಯಲ್ಲಿ ಪ್ರತಿಭಟನೆಗೂ ಮುನ್ನ ಪಿಎಸ್‌ಐ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
