
ಬೆಳಗಾವಿ ಕಾನೂನು ಮತ್ತು ಸುವ್ಯವಸ್ಥೆಯ ಡಿಸಿಪಿ ರೋಹನ್ ಜಗದೀಶ್ ಅವರನ್ನು ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಕ ಮಾಡಿ ಸರಕಾರ ಸೋಮವಾರ ರಾತ್ರಿ ಆದೇಶ ಹೊರಡಿಸಿದೆ.
ಬೆಳಗಾವಿಯಲ್ಲಿ ರೋಹನ್ ಜಗದೀಶ್ ಡಿಸಿಪಿಯಾಗಿ ಬೆಳಗಾವಿ ಚಳಿಗಾಲದ ಅಧಿವೇಶ, ಲೋಕಸಭಾ ಚುನಾವಣೆ ಸೇರಿದಂತೆ ನಗರದ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಶ್ರಮಿಸಿದ್ದರು. ಅವರಿಗೆ ಸರಕಾರ ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಬಡ್ತಿ ನೀಡಿ ಆದೇಶ ಹೊರಡಿಸಿದೆ.
