
ಬೆಳಗಾವಿ
ಕೃಷಿ ಹೊಂಡದಲ್ಲಿ ಮುಳುಗಿ ತಂದೆ ಮಗ ಮೃತಪಟ್ಟ ಘಟನೆ ಭಾನುವಾರ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮಳಗಲಿ ಗ್ರಾಮದಲ್ಲಿ ನಡೆದಿದೆ.

ತಂದೆ ಬಸವರಾಜ್ ಕೆಂಗೇರಿ(40), ಮಗ ಧರೆಪ್ಪ ಕೆಂಗೇರಿ(14) ಮೃತ ದುರ್ದೈವಿ. ಬಸವರಾಜ್ ಕೆಂಗೇರಿ ಸವದತ್ತಿ ತಾಲೂಕಿನ ಮುರಗೋಡ ಗ್ರಾಮದ ನಿವಾಸಿಯಾಗಿದ್ದಾನೆ.ಹೆಂಡತಿ ಊರಲ್ಲಿರುವ ಜಮೀನಿಗೆ ಕೀಟನಾಶಕ ಹೊಡೆಯಲು ಹೋಗಿದ್ದ ಬಸವರಾಜ ಕೃಷಿ ಹೊಂಡದಲ್ಲಿ ನೀರು ತರಲು ಹೋಗಿ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ. ಮಗ ಧರೆಪ್ಪ ಮತ್ತೋರ್ವ ಬಾಲಕ ಬಾಗಪ್ಪ ಸಣ್ಣಕ್ಕಿ ತಕ್ಷಣ ಇಬ್ಬರ ರಕ್ಷಣೆಗೆ ಧಾವಿಸಿದ್ದ ಬಸವರಾಜ್ ಕೆಂಗೇರಿ. ಈ ವೇಳೆ ತಾನೂ ಕೂಡ ಮುಳಗಿ ಬಸವರಾಜ್ ಮತ್ತು ಧರೆಪ್ಪ ಮೃತಪಟ್ಟಿದ್ದಾನೆ. ಪಕ್ಕದ ಜಮೀನಿನಲ್ಲಿ ಕೆಲಸ ಮಾಡ್ತಿದ್ದವರಿಂದ ಬಾಗಪ್ಪ ರಕ್ಷಣೆ ಮಾಡಿದ್ದಾರೆ. ಗಂಭೀರ ಸ್ಥಿತಿಯಲ್ಲಿರುವ ಬಾಲಕ ಬಾಗಪ್ಪಗೆ ಬೈಲಹೊಂಗಲ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ. ಸ್ಥಳಕ್ಕೆ ಮುರಗೋಡ ಪೊಲೀಸರ ಭೇಟಿ ಪರಿಶೀಲನೆ.ಮುರಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
