Monday, November 23, 2026
HomeBelagaviಪಿಕೆಪಿಎಸ್ ಚುನಾವಣೆಯಲ್ಲಿ ಚನ್ನರಾಜ ಅವಿರೋಧ ಆಯ್ಕೆ

ಪಿಕೆಪಿಎಸ್ ಚುನಾವಣೆಯಲ್ಲಿ ಚನ್ನರಾಜ ಅವಿರೋಧ ಆಯ್ಕೆ

ಖಾನಾಪುರ
ಖಾನಾಪುರ ತಾಲೂಕಿನ ಚಿಕ್ಕಹಟ್ಟಿಹೊಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಗೆ ಸಾಮಾನ್ಯ ಮತಕ್ಷೇತ್ರದಿಂದ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸೋಮವಾರ ಈ ಆಯ್ಕೆ ನಡೆದಿದ್ದು, ಈ ಹಿನ್ನೆಲೆಯಲ್ಲಿ ಗ್ರಾಮದ ಹಿರಿಯರು, ಮುಖಂಡರು ಹಾಗೂ ಹಿತೈಷಿಗಳು ಸೇರಿದಂತೆ ವಿವಿಧ ಸಂಘಟನೆಗಳ ವತಿಯಿಂದ ಅವರನ್ನು ಪ್ರೀತಿಪೂರ್ವಕವಾಗಿ ಸನ್ಮಾನಿಸಲಾಯಿತು.

ಈ ಪಿಕೆಪಿಎಸ್‌ ಚುನಾವಣೆಯ ಫಲಿತಾಂಶದಿಂದ ನನ್ನ ಹೆಗಲಿಗೆ ಮತ್ತೊಂದು ಮಹತ್ವದ ಜವಾಬ್ದಾರಿ ಸೇರಿದೆ. ಕಾಯಾ-ವಾಚಾ-ಮನಸಾ ಸಹಕಾರ ಸಂಘದ ಮೂಲಕ ಮತ್ತಷ್ಟು ಜನರ ಸೇವೆಯಲ್ಲಿ ತೊಡಗಿಕೊಳ್ಳುವ ಸಂಕಲ್ಪ ಮಾಡಿದ್ದೇನೆ ಎಂದು ಚನ್ನರಾಜ ಹಟ್ಟಿಹೊಳಿ ತಿಳಿಸಿದ್ದಾರೆ.

Total Views 189
RELATED ARTICLES

Most Popular

Recent Comments

KNN City News
Home
E-Paper