
ಬೆಳಗಾವಿ
ಪಶ್ಚಿಮ ಘಟ್ಟಗಳಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಬೆಳಗಾವಿಯಲ್ಲಿಯೂ ಮುಂದುವರೆದ ಹಿನ್ನೆಲೆಯಲ್ಲಿ ಬೆಳಗಾವಿ, ಕಿತ್ತೂರು, ಬೈಲಹೊಂಗಲ, ಸವದತ್ತಿ ಹಾಗೂ ಖಾನಾಪುರ ತಾಲ್ಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಇಂದು ಸೋಮವಾರ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ರಜೆಯನ್ನು ಘೋಷಿಸಿ ಆದೇಶ ಹೊರಡಿಸಿದ್ದಾರೆ.
