
ಬೆಳಗಾವಿ
ಕಳೆದ ಮೂರು ದಿನದ ಹಿಂದೆ ಹೆಂಡತಿಯನ್ನು ಕೊಲೆ ಮಾಡಿ ಬೆಡ್ ಕೆಳಗೆ ಅಡಗಿಸಿಟ್ಟು ಮೊಬೈಲ್ ಸ್ವಿಚ್ ಆಫ್ ಮಾಡಿ ಗಂಡ ಪರಾರಿಯಾದ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಕಮಲದಿನ್ನಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ಸಾಕ್ಷಿ ಆಕಾಶ ಕುಂಬಾರ (20) ಕೊಲೆಯಾದ ಹೆಂಡತಿ ಎಂದು ಗುರುತಿಸಲಾಗಿದೆ. ಕಳೆದ ನಾಲ್ಕು ತಿಂಗಳ ಹಿಂದೆಯೇ ಆಕಾಶ ಜೊತೆಗೆ ಮದುವೆಯಾಗಿದ್ದ ಸಾಕ್ಷಿಗೆ ವರದಕ್ಷಿಣೆ ತರುವಂತೆ ಆಕೆಯ ಗಂಡ ಆಕಾಶ ಕಾಡಿಸುತ್ತಿದ್ದ ಎಂದು ಶಂಕಿಸಲಾಗಿದೆ.
ಕಳೆದ ಮೂರು ದಿನಗಳ ಹಿಂದೆ ಕೊಲೆ ಮಾಡಿ ಪತಿ ಪರಾರಿಯಾಗಿದ್ದು, ಮುಂಬೈಊರಿಗೆ ಹೋಗಿದ್ದ ಅತ್ತೆ ಮರಳಿ ಮನೆಗೆ ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಮೂಡಲಗಿ ಪೊಲೀಸರ ಹಾಗೂ ಗೋಕಾಕ ಡಿವೈಎಸ್ಪಿ ಭೇಟಿ ಪರಿಶೀಲನೆ ನಡೆಸಿದ್ದಾರೆ. ಸ್ಥಳಕ್ಕೆ ಮೂಡಲಗಿ ತಹಶೀಲ್ದಾರ್ ಶ್ರೀಶೈಲ್ ಗುಡಮೆ ಭೇಟಿ ನೀಡಿದ್ದಾರೆ. ಮೂಡಲಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
