
ರಾಯಬಾಗ
ರಾಯಬಾಗ ತಾಲೂಕಿನ ಮುಗಳಖೋಡ ಕ್ರಾಸ್ ಸಮೀಪದ ಮಾವಿನ ಪಟ್ಟಿ ಹಳ್ಳದ ಸೇತುವೆ ಮೇಲೆ ರಾಜ್ಯ ರಸ್ತೆ ಸಾರಿಗೆ ಬಸ್ ಹಾಗೂ ಬೈಕ್ ನಡುವೆ ಇಂದು ಮಧ್ಯಾಹ್ನ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಸಾವನ್ನಪ್ಪಿರುವ ಬೈಕ್ ಸವಾರ ರಾಯಬಾಗ ತಾಲೂಕಿನ ಪಾಲಬಾವಿ ಗ್ರಾಮದ ನಿವಾಸಿ 42 ವಯಸ್ಸಿನ ಅಡಿವೇಪ್ಪಾ ಹಿರಾಬಳಿ ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಹಾರೂಗೇರಿ ಪೊಲೀಸರು ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ. ರಾಯಬಾಗ ತಾಲೂಕಿನ ಹಾರೂಗೇರಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಘಟನೆ ಇದಾಗಿದೆ.
