
ಬೆಳಗಾವಿ
ವಾಲ್ಮೀಕಿ ಸಮುದಾಯ ಬಗ್ಗೆ ರಮೇಶ್ ಕತ್ತಿ ಅವಹೇಳನಕಾರಿ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿ ವಾಲ್ಮೀಕಿ ಸಮಾಜದಿಂದ ಭಾನುವಾರ ರಾತ್ರಿ ಪ್ರತಿಭಟನೆ ನಡೆಸಿ ಒತ್ತಾಯಿಸಿದರು.
ಬೆಳಗಾವಿಯ ಚನ್ನಮ್ಮ ವೃತ್ತದಲ್ಲಿ ಮಾಜಿ ಸಂಸದ ರಮೇಶ್ ಕತ್ತಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು ರಮೇಶ್ ಕತ್ತಿ ಭಾವಚಿತ್ರ ಹಿಡಿದು ಧಿಕ್ಕಾರ ಕೂಗಿ ನ್ಯಾಯಕ್ಕಾಗಿ ಆಗ್ರಹಿಸಿದರು. ನಾಯಕ ಸಮಾಜವನ್ನು ಅವಮಾನ ಮಾಡಿರುವ ಮಾಜಿ ಸಂಸದ ರಮೇಶ್ ಕತ್ತಿ ಬಂಧಿಸುವಂತೆ ಒತ್ತಾಯ ಮಾಡಿದರು.
