Monday, November 23, 2026
HomeBelagaviಸಮಯಕ್ಕೆ ಸಾರಿಗೆ ಬಸ್ ಬಿಡುವಂತೆ ಶಾಲಾ ವಿದ್ಯಾರ್ಥಿಗಳ ಪ್ರತಿಭಟನೆ

ಸಮಯಕ್ಕೆ ಸಾರಿಗೆ ಬಸ್ ಬಿಡುವಂತೆ ಶಾಲಾ ವಿದ್ಯಾರ್ಥಿಗಳ ಪ್ರತಿಭಟನೆ

ಬೆಳಗಾವಿ
ಶಕ್ತಿ ಯೋಜನೆ ಜಾರಿಯಾದಗಿನಿಂದ ವಿದ್ಯಾರ್ಥಿಗಳು ಸಾರಿಗೆ ಬಸ್ ನ ಸಮಸ್ಯೆ ಅನುಭವಿಸುತ್ತಿದ್ದು, ಬೆಳಗಾವಿ ತಾಲೂಕಿನ ಧಾಮಣೆ ಗ್ರಾಮದಲ್ಲಿ ಸಮರ್ಪಕವಾಗಿ ಸಾರಿಗೆ ಬಸ್ ಬಿಡುವಂತೆ ಆಗ್ರಹಿಸಿ ಶುಕ್ರವಾರ ವಿದ್ಯಾರ್ಥಿಗಳು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.
ಧಾಮಣೆ ಗ್ರಾಮಕ್ಕೆ ಬರುವ ಸಾರಿಗೆ ಬಸ್ ಗಳು ಅಸಮರ್ಪಕವಾದ ವೇಳೆಗೆ ಆಗಮಿಸಿ ವಿದ್ಯಾರ್ಥಿಗಳನ್ನು ಬಸ್ ನಲ್ಲಿ ಪ್ರಯಾಣಿಸಲು ಬಿಡುತ್ತಿಲ್ಲ. ಇದರಿಂದ ನಮಗೆ ಶಾಲಾ, ಕಾಲೇಜುಗಳಿಗೆ ತೆರಳಲು ಸಮಸ್ಯೆಯಾಗುತ್ತಿದೆ. ಶಾಲೆಯ ವೇಳೆಯ ಸಮಯಕ್ಕೆ ಸಾರಿಗೆ ಬಸ್ ಬಿಡುವಂತೆ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.

Total Views 95
RELATED ARTICLES

Most Popular

Recent Comments

KNN City News
Home
E-Paper