
ಕಾಂಗ್ರೆಸ್ ಹಿರಿಯ ಶಾಸಕ, ಮಾಜಿ ಸಚಿವ, ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕಪ್ಪ ನಿಧನರಾಗಿದ್ದಾರೆ.
92 ವರ್ಷದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕಳೆದ ಕೆಲ ತಿಂಗಳನಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶಾಮನೂರು ಶಿವಶಂಕಪ್ಪ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾದ ಹಿನ್ನೆಲೆ ಭಾನುವಾರ ಸಂಜೆ ಮೃತಪಟ್ಟಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
