Monday, November 23, 2026
HomeBelagaviಜೀವಂತ ವ್ಯಕ್ತಿಗೆ ಮರಣಪತ್ರ ನೀಡಿದ್ದ ಅಧಿಕಾರಿ ಅಮಾನತು

ಜೀವಂತ ವ್ಯಕ್ತಿಗೆ ಮರಣಪತ್ರ ನೀಡಿದ್ದ ಅಧಿಕಾರಿ ಅಮಾನತು

ಬೆಳಗಾವಿ
ರೈತರೊಬ್ಬರು ಜೀವಂತವಿದ್ದರೂ ಅವರ ಮರಣ ಪ್ರಮಾಣಪತ್ರ ನೀಡಿದ ನಾಲ್ವರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. ಅಲ್ಲದೆ, ಲೋಪ ಮಾಡಿದ ಅಧಿಕಾರಿಯನ್ನು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ಬದುಕಿದ ವ್ಯಕ್ತಿಗೆ ಮರಣ ಪತ್ರ ನೀಡಿದ ಅಧಿಕಾರಿಗಳು ಶಿರ್ಷಿಕೆಯಡಿ ಕನ್ನಡಮ್ಮ ದಿನಪತ್ರಿಕೆ ವಿಶೇಷ ವರದಿ ಪ್ರಕಟಿಸಿದ್ದನ್ನು ಗಂಭೀರವಾಗಿ ಪರಿಗಣಿಸಿದ್ದ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಲೋಪ ಮಾಡಿದ ಅಧಿಕಾರಿಯನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.


ಬೆಳಗಾವಿ ಜಿಲ್ಲೆಯ ಸವದತ್ತಿ ತಾಲ್ಲೂಶಿವ ಸುತಗಟ್ಟಿ ಗ್ರಾಮದ ರೈತ ಈರಪ್ಪ ನಾಗಪ್ಪ ಅಬ್ಬಾಯಿ ಎಂಬುವರು ಇನ್ನೂ ಬದುಕಿದ್ದಾರೆ. ಆದರೆ, 2021ರಲ್ಲೇ ಅವರು ಮರಣ ಹೊಂದಿದ್ದಾರೆ ಎಂದು ಅವರ ದಾಖಲೆಗಳಲ್ಲಿ ದೃಢೀಕರಿಸಲಾಗಿದೆ. ಕಳೆದ ಐದು ವರ್ಷಗಳಿಂದ ರೈತನಿಗೆ ಈ ವಿಷಯ ಗೊತ್ತಿಲ್ಲದೇ ಸರ್ಕಾರಿ ಯೋಜನೆಗಳಿಂದ ವಂಚಿತರಾಗಿದ್ದಾರೆ.
ಈ ಬಗ್ಗೆ ‘ ಕನ್ನಡಮ್ಮ ಪತ್ರಿಕೆಯಲ್ಲಿ 10-01-2026ರಂದು ‘ 2021ರಲ್ಲೇ ಮರಣ ಪತ್ರ- ಕಂಗಾದ ಈರಪ್ಪʼ ಶೀರ್ಷಿಕೆಯಡಿ ವರದಿ ಪ್ರಕಟವಾಗಿತ್ತು. ಇದನ್ನು ಆಧರಿಸಿ ದೂರು ದಾಖಲಿಸಿಕೊಂಡಿರುವುದಾಗಿ ಉಪ ಲೋಕಾಯುಕ್ತ ನ್ಯಾಯಮೂರ್ತಿ ವೀರಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಲೋಪ ಎಸಗಿದ ಸುತಗಟ್ಟಿ ಗ್ರಾಮ ಅಡಳಿತಾಧಿಕಾರಿ ನೀಲಾ ಮುರಗೋಡ, ಮುರಗೋಡ ವೃತ್ತದ ಕಂದಾಯ ನಿರೀಕ್ಷಕ ಆರ್.ಎಸ್.ಪಾಟೀಲ, ಸವದತ್ತಿ ತಹಶೀಲ್ದಾರ ಮಲ್ಲಿಕಾರ್ಜುನ ಹೆಗ್ಗನ್ನವರ, ಬೈಲಹೊಂಗಲ ಉಪವಿಭಾಗಾಧಿಕಾರಿ ಪ್ರವೀಣ ಜೈನ್ ಅವರ ಮೇಲೆ ದೂರು ದಾಖಲಿಸಿಕೊಂಡು, ವಿಚಾರಣೆ ಮುಂದುವರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

Total Views 288
RELATED ARTICLES

Most Popular

Recent Comments

KNN City News
Home
E-Paper