
ಬೆಳಗಾವಿ
ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ರಾಜ್ಯ ರಾಜಕಾರಣಕ್ಕೆ ಬರಲಿರುವ ವಿಚಾರದಲ್ಲಿ ಯಾವುದೇ ತಪ್ಪಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.
ಶುಕ್ರವಾರ ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಕುಮಾರಸ್ವಾಮಿ ರಾಜ್ಯಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ ಎಂದರು.
ಬಳ್ಳಾರಿ ಪಾದಯಾತ್ರೆ ಕುರಿತ ಗೊಂದಲಗಳ ಕುರಿತು ಪ್ರತಿಕ್ರಿಯಿಸಿದ ವಿಜಯೇಂದ್ರ, ಹಿಂದೆ ಪಾದಯಾತ್ರೆ ನಡೆದ ಸಂದರ್ಭಗಳಲ್ಲಿ ಗೊಂದಲಗಳು ಉಂಟಾಗಿದ್ದವು. ಇಂತಹ ಪರಿಸ್ಥಿತಿಗೆ ಮತ್ತೆ ಅವಕಾಶ ಕೊಡಬಾರದು ಎಂದು ಎಚ್ಚರಿಕೆ ನೀಡಿದರು. ಪಾದಯಾತ್ರೆ ಕುರಿತು ಯಾವುದೇ ನಿರ್ಧಾರ ಕೈಗೊಂಡರೂ ಅದನ್ನು ಕೇಂದ್ರ ನಾಯಕತ್ವದ ಗಮನಕ್ಕೆ ತರಬೇಕು ಎಂದು ಹೇಳಿದರು. ಈ ವಿಚಾರವನ್ನು ರಾಜ್ಯ ನಾಯಕರ ಗಮನಕ್ಕೂ ತಂದಿರುವುದಾಗಿ ತಿಳಿಸಿದರು.
ಬಿಜೆಪಿ ಹೊಸ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಶೀಘ್ರದಲ್ಲೇ ನಡೆಯಲಿದ್ದು, ಅದರ ನಂತರ ಕೇಂದ್ರ ನಾಯಕರೊಂದಿಗೆ ಈ ಕುರಿತು ಚರ್ಚೆ ನಡೆಸಲಾಗುವುದು ಎಂದು ವಿಜಯೇಂದ್ರ ಹೇಳಿದರು. ಎಲ್ಲ ವಿಷಯಗಳನ್ನು ಚರ್ಚಿಸಬೇಕಾದ ವೇದಿಕೆಯಲ್ಲಿ ಸೂಕ್ತವಾಗಿ ಚರ್ಚಿಸಲಾಗುತ್ತದೆ ಎಂದರು.
ಪಾದಯಾತ್ರೆಗೆ ವೈಯಕ್ತಿಕವಾಗಿ ತಮ್ಮ ವಿರೋಧ ಇಲ್ಲ ಎಂದು ಸ್ಪಷ್ಟಪಡಿಸಿದ ವಿಜಯೇಂದ್ರ, ಶ್ರೀರಾಮುಲು ಅವರ ಹೇಳಿಕೆಯನ್ನು ಗಮನಿಸಿದ್ದೇನೆ ಎಂದರು.
ಇದೇ ವೇಳೆ ಜಿಬಿಎ ಚುನಾವಣೆ ಘೋಷಣೆ ಕುರಿತು ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ಪಕ್ಷದಲ್ಲಿ ಅಗತ್ಯವಾದ ಸ್ಟ್ರಾಟಜಿ ರೂಪಿಸಲಾಗುತ್ತಿದೆ ಎಂದು ಹೇಳಿದರು.
ವಿಬಿಜಿ ರಾಮಜೀ ಯೋಜನೆಯಿಂದ ಪ್ರಧಾನಿ ನರೇಂದ್ರ ಮೋದಿ ಮನರೇಗಾ ಯೋಜನೆಯಿಂದ ದೇಶದ ಜನರಿಗೆ ಲಾಭವಾಗಲು ಹೆಸರು ಬದಲಾವಣೆ ಮಾಡಿರುವುದಕ್ಕೆ ಕೇಂದ್ರ ಸರಕಾರದ ವಿರುದ್ಧ ದ್ವೇಷ ಸಾಧಿಸಲು ರಾಜ್ಯ ಕಾಂಗ್ರೆಸ್ ಸರಕಾರ ಹೊರಟ್ಟಿದೆ ಕೇಂದ್ರ ಸರಕಾರದ ವಿಬಿ ರಾಮಜಿ ಯೋಜನೆಯ ವಿರುದ್ಧ ವಿಶೇಷ ಅಧಿವೇಶನ ಕರೆದು ಜನರನ್ನು ಎನ್ ಡಿಎ ಸರಕಾರದ ವಿರುದ್ಧ ಎತ್ತಿಕಟ್ಟುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಹರಿಹಾಯ್ದರು.
ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಖುರ್ಚಿ ಉಳಿಸಿಕೊಳ್ಳಲು, ಕಾಲಹರಣ ಮಾಡಲು ಹಾಗೂ ಡಿಕೆಶಿಗೆ ಕೈ ಕೊಡಲು ವಿಶೇಷ ಅಧಿವೇಶನ ನಡೆಸುತ್ತಿದ್ದಾರೆ. ಸರಕಾರ ಬಂದು ಮೂರು ವರ್ಷ ಕಳೆಯಲು ಬಂದಿದೆ. ಜನಪರ ಯೋಜನೆ ಕೊಟ್ಟಿರುವ ಬಗ್ಗೆ ಚರ್ಚೆ ಮಾಡಲಿ ಎಂದು ಸವಾಲ್ ಹಾಕಿದರು.
ಕೇಂದ್ರ ಸಚಿವ ಕುಮಾರಸ್ವಾಮಿ ಅವರು ರಾಜ್ಯ ರಾಜಕಾರಣಕ್ಕೆ ಬಂದರೆ ತಪ್ಪೇನಿದೆ. ಅವರು ಮುಖ್ಯಮಂತ್ರಿಯಾಗಿ ಕೆಲಸ ಮಾಡಿದ್ದಾರೆ. ಅವರು ರಾಜ್ಯ ರಾಜಕಾರಣಕ್ಕೆ ಬಂದರೆ ಸ್ವಾಗತ ಎಂದರು.
