Monday, November 23, 2026
HomeBelagaviಜ.20 ರಂದು ಸಂಚಾರಿ ಧರ್ಮಜಾಗೃತಿ ಯಾತ್ರೆ: ಶ್ರೀಶೈಲ ಜಗದ್ಗುರುಗಳು

ಜ.20 ರಂದು ಸಂಚಾರಿ ಧರ್ಮಜಾಗೃತಿ ಯಾತ್ರೆ: ಶ್ರೀಶೈಲ ಜಗದ್ಗುರುಗಳು

ಯಡೂರ ವೀರಭದ್ರೇಶ್ವರ ದೇವಸ್ಥಾನದ ಮಹಾಕುಂಭಾಭಿಷೇಕ, ಲಕ್ಷ್ಮದೀಪೋತ್ಸವ, ಕೃಷ್ಣಾರತಿ ಮತ್ತು ಪುರವಂತರ ಮಹಾಮೇಳ ಅಂಗವಾಗಿ ನಗರದ ಗಾಂಧಿ ಭವನದಲ್ಲಿ ಜ.20ರಂದು ಸಂಜೆ 5 ಗಂಟೆಗೆ ಶ್ರೀಭದ್ರಕಾಳಿ-ವೀರಭದ್ರೇಶ್ವರ ಕಲ್ಯಾಣ ಮಹೋತ್ಸವ ಹಾಗೂ ಶ್ರೀ ಜಗದ್ಗರುಗಳ ಸಂಚಾರಿ ಧರ್ಮಜಾಗೃತಿ ಯಾತ್ರೆ ಉದ್ಘಾಟನೆ ಸಮಾರಂಭ ಜರುಗಲಿದೆ ಎಂದು ಶ್ರೀಶೈಲ ಜಗದ್ಗುರು ಡಾ.ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯರು ತಿಳಿಸಿದರು.
ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ನಡೆಯುವ ಕಾರ್ಯಕ್ರಮದ ಸಾನಿಧ್ಯ ಶ್ರೀಮದ್ ಗಿರಿರಾಜ ಸೂರ್ಯಸಿಂಹಾಸನಾಧೀಶ್ವರ ಜಗದ್ಗರು ಡಾ.ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯರು ವಹಿಸಲಿದ್ದಾರೆ. ಕಟಕೊಳ ಚಂದರಗಿ ಹಿರೇಮಠದ ವೀರಭದ್ರ ಶಿವಯೋಗಿ ಶಿವಾಚಾರ್ಯ ಸ್ವಾಮೀಜಿ, ನಾಗನೂರು ರುದ್ರಾಕ್ಷಿಮಠದ ಅಲ್ಲಮಪ್ರಭು ಸ್ವಾಮೀಜಿ, ಭೂತರಾಮನಹಟ್ಟಿಯ ಮುಕ್ತಿಮಠದ ಶಿವಸಿದ್ಧ ಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ, ಕಾರಂಜಿಮಠದ ಗುರುಸಿದ್ದ ಸ್ವಾಮೀಜಿ ನೇತೃತ್ವ ವಹಿಸಲಿದ್ದಾರೆ.ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಸೇರಿ ಸಮಸ್ತ ಮಠಾಧೀಶರ ಸಮ್ಮುಖ ವಹಿಸಲಿದ್ದಾರೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ಮಾಜಿ ಎ.ಬಿ. ಪಾಟೀಲ ವಹಿಸಲಿದ್ದು, ಉದ್ಘಾಟನೆಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಡಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ, ಸಂಸದ ಜಗದೀಶ ಶೆಟ್ಟರ್, ಕೆಎಲ್‌ಇ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ, ಮಾಜಿ ಸಚಿವೆ ಶಶಿಕಲಾ ಜೊಲ್ಲೆ, ಮಾಜಿ ಎಂಎಲ್‌ಸಿ ಮಹಾಂತೇಶ ಕವಟಗಿಮಠ ಭಾಗವಹಿಸಲಿದ್ದಾರೆ ಎಂದು ವಿವರಿಸಿದರು.
ಸಾಮೂಹಿಕ ಲಿಂಗದೀಕ್ಷಾ ಕಾರ್ಯಕ್ರಮ: ನಗರದಲ್ಲಿ ಜ.21ರಂದು ಬೆಳಗ್ಗೆ 10 ಗಂಟೆಗೆ ಶ್ರೀಭದ್ರಕಾಳಿ-ವೀರಭದ್ರೇಶ್ವರ ಸಾಮೂಹಿಕ ತುಲಾಭಾರ ಹಾಗೂ ಸಾಮೂಹಿಕ ಲಿಂಗದೀಕ್ಷಾ ಕಾರ್ಯಕ್ರಮ ಜರುಗಲಿದೆ.ಸಾನಿಧ್ಯವನ್ನು ಶ್ರೀಶೈಲ ಜಗದ್ಗುರು ಡಾ.ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯರು ವಹಿಸಲಿದ್ದಾರೆ. ಶಹಾಪೂರ ಹಿರೇಮಠದ ಸೂಗುರೇಶ್ವರ ಶಿವಾಚಾರ್ಯ ಸ್ವಾಮೀಜಿ, ನೀಲಗಲ್ ಸಂಸ್ಥಾನ ಬ್ರಹನ್ಮಠದ ರೇಣುಕ ಶಾಂತಮಲ್ಲ ಶಿವಾಚಾರ್ಯ ಸ್ವಾಮೀಜಿ, ಸಿಂಗದಿ, ಜೈನಾಪುರ, ಬನಹಟ್ಟಿ, ಮಾಂಜರಿ, ಜಮಖಂಡಿ, ಕಪರಟ್ಟಿ-ಕಳ್ಳಿಗುದ್ದಿ, ನಾಗಣಸೂರ-ರೇವೂರ, ಅಂಬಿಕಾನಗರ,ಬೈಲಹೊಂಗಲ, ಬೆಂಗಳೂರು ಶ್ರೀಗಳು, ಶಾಸ್ತ್ರೀಗಳು ಭಾಗವಹಿಸಲಿದ್ದಾರೆ.
ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ಇಳಕಲ್ಲ ಅನ್ನದಾನ ಶಾಸ್ತ್ರಿ, ಸುರಗೀಶ್ವರ ಮಠದ ಗುರುಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ, ಬಸವರಾಜ ಭಾತೆ ಇತರರಿದ್ದರು.

Total Views 52
RELATED ARTICLES

Most Popular

Recent Comments

KNN City News
Home
E-Paper