Monday, November 23, 2026
HomeBelagaviಅಸಲಿ ಪತ್ರಕರ್ತರ ಸೋಗಿನಲ್ಲಿ ಮಹಿಳಾ ಅಧಿಕಾರಿಗೆ ಬ್ಲ್ಯಾಕ್ ಮೇಲ್ ಮಾಡಿದ್ದ ಖದೀಮರ ಹೆಡೆಮುರಿ ಕಟ್ಟಿದ್ದ ಖಾಕಿ

ಅಸಲಿ ಪತ್ರಕರ್ತರ ಸೋಗಿನಲ್ಲಿ ಮಹಿಳಾ ಅಧಿಕಾರಿಗೆ ಬ್ಲ್ಯಾಕ್ ಮೇಲ್ ಮಾಡಿದ್ದ ಖದೀಮರ ಹೆಡೆಮುರಿ ಕಟ್ಟಿದ್ದ ಖಾಕಿ

ಬೆಳಗಾವಿ
ಸರಕಾರಿ ಮಹಿಳಾ ಅಧಿಕಾರಿಯ ಮನೆಯ ಕೊಠಡಿಯಲ್ಲಿ ಹಿಡನ್ ಕ್ಯಾಮರಾ ಬಳಸಿ ಬ್ಲ್ಯಾಕ್ ಮೇಲೆ ಮಾಡಿದ್ದ ಮೂವರು ಪತ್ರಕರ್ತರ ಸೋಲಿನಲ್ಲಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಸಮೀರ್ ನಿಸಾರ್ ಅಹ್ಮದ್ ಶೇಖ್ (32), ಅಬ್ದುಲ್ ರಶೀದ್ ಮಕಾನದಾರ (51), ಮೊಹಮ್ಮದ್ ಬಾಳೇಕುಂದ್ರಿ ಬಂಧಿತ ನಕಲಿ ಪತ್ರಕರ್ತರು. ಮಹಿಳಾ ಅಧಿಕಾರಿ ಮನೆಯ ಕೊಠಡಿಯಲ್ಲಿ ಹಿಡನ್ (ರಹಸ್ಯ) ಕ್ಯಾಮರಾ ಇಟ್ಟು ಅವರ ಖಾಸಗಿ ವಿಡಿಯೋಗಳನ್ನು ಮುಂದಿಟ್ಟುಕೊಂಡು ಬರೋಬರಿ ಒಂದು ಕೋಟಿ ರೂ.ಗೆ ಬ್ಲ್ಯಾಕ್ ಮಾಡಿದ್ದ ಈ ನಕಲಿ ಪತ್ರಕರ್ತರು, 50 ಲಕ್ಷ ರೂ. ಕೊಡುವಂತೆ ಪೀಡಿಸುತ್ತಿದ್ದರು. ಮಹಿಳಾ ಅಧಿಕಾರಿ ಮಾಳಮಾರುತಿ ಪೊಲೀಸರಿಗೆ ದೂರು ನೀಡಿದ ಹಿನ್ನೆಲೆಯಲ್ಲಿ ಸಿಪಿಐ ಬಿ.ಆರ್. ಗಡ್ಡೇಕರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಬ್ಲ್ಯಾಕ್ ಮೇಲ್ ಮಾಡಿದ್ದ ನಕಲಿ ಪತ್ರಕರ್ತರ ಸೋಲಿನಲ್ಲಿದ್ದ ನಕಲಿ ಪತ್ರಕರ್ತರ ಹೆಡೆಮುರಿ ಕಟ್ಟಿದ್ದಾರೆ.
ಪ್ರಕರಣ ದಾಖಲು ಮಾಡದಿರಲು ಸಾಕಷ್ಟು ಒತ್ತಡ ಹಾಕಿದ್ದರು. ಲೆಕ್ಕಕ್ಕೆ ತೆಗೆದುಕೊಳ್ಳದ ಮಾಳಮಾರುತಿ ಪೊಲೀಸರು ಸರಕಾರಿ ಮಹಿಳಾ ಅಧಿಕಾರಿಗೆಯೇ ಬ್ಲ್ಯಾಕ್ ಮಾಡಿರುವ ಈ ಖದೀಮರ ಜಾಲ ದೊಡ್ಡದಿರಬಹುದು ಎಂದು ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದು, ಎಲ್ಲಾ ಆಯಾಮದಲ್ಲಿ ತನಿಖೆ ‌ನಡೆಸಿ ವಿಚಾರಣೆ ನಡೆಸಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಭೂಷಣ್ ಬೊರಸೆ ತಿಳಿಸಿದ್ದಾರೆ.

Total Views 1426
RELATED ARTICLES

Most Popular

Recent Comments

KNN City News
Home
E-Paper