Monday, November 23, 2026
HomeBelagaviಎಸ್ಸೆಸ್ಸೆಲ್ಸಿ ಮಕ್ಕಳು ದೈರ್ಯದಿಂದ ಪರೀಕ್ಷೆ ಎದುರಿಸಿ: ಬೆಳಗಾವಿ ಹುಕ್ಕೇರಿ ಶ್ರೀಗಳು

ಎಸ್ಸೆಸ್ಸೆಲ್ಸಿ ಮಕ್ಕಳು ದೈರ್ಯದಿಂದ ಪರೀಕ್ಷೆ ಎದುರಿಸಿ: ಬೆಳಗಾವಿ ಹುಕ್ಕೇರಿ ಶ್ರೀಗಳು

ಬೆಳಗಾವಿ
ರಾಜ್ಯಾದ್ಯಂತ ಮಾ.18ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭವಾಗಲಿದೆ. ಮಕ್ಕಳು ಭಯ ಮುಕ್ತ ದೈರ್ಯದಿಂದ ಎದುರಿಸಬೇಕು ಎಂದು ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆಯ ರಾಷ್ಟ್ರೀಯ ಉಪಾಧ್ಯಕ್ಷ, ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ವಿದ್ಯಾರ್ಥಿಗಳಿಗೆ ಕರೆ ನೀಡಿದ್ದಾರೆ.
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಯಾವುದೇ ಗೊಂದಲ ಅಥವಾ ಆತಂಕ ಇಟ್ಟುಕೊಳ್ಳದೇ ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿ ಆಗ ಉತ್ತಮ ಅಂಕಗಳನ್ನು ಗಳಿಸುತ್ತೀರಿ. ಪ್ರಶ್ನೆಗೆ ತಕ್ಕಂತೆ ಉತ್ತರಗಳು ಬರುತ್ತಾ ಹೋಗುತ್ತವೆ. ಭಯವನ್ನು ಪರೀಕ್ಷಾ ಕೇಂದ್ರಕ್ಕೆ ಒಯ್ಯಬಾರದು ಎಸ್ಸೆಸ್ಸೆಲ್ಸಿ ಪರೀಕ್ಷೆ ವಿಧ್ಯಾರ್ಥಿಗಳ ಪ್ರಮುಖ ಘಟವಾಗಿದ್ದು ದೈರ್ಯದಿಂದ ಪರೀಕ್ಷೆ ಎದುರಿಸಿ ಆಲ್ ದಿ ಬೆಸ್ಟ್ ಮಕ್ಕಳೆ ಎಂದು ಶ್ರೀಗಳು ತಿಳಿಸಿದ್ದಾರೆ.

Total Views 112
RELATED ARTICLES

Most Popular

Recent Comments

KNN City News
Home
E-Paper