Monday, November 23, 2026
HomeBelagaviಲಿಂಗಾಯತರಿಗೆ ಮತ್ತೇ ಅನ್ಯಾಯ: ನೇಕಾರ ಸಮಾಜಕ್ಕೆ ಮೇಯರ್ ಸ್ಥಾನ

ಲಿಂಗಾಯತರಿಗೆ ಮತ್ತೇ ಅನ್ಯಾಯ: ನೇಕಾರ ಸಮಾಜಕ್ಕೆ ಮೇಯರ್ ಸ್ಥಾನ

ಬೆಳಗಾವಿ
ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಮೇಯರ್ ಹಾಗೂ ಉಪ ಮೇಯರ್ ಚುನಾವಣೆಗೆ ರಾಜಕೀಯ ಚಟುವಟಿಕೆಗಳು ತೀವ್ರಗೊಂಡಿವೆ.
ನೇಕಾರರ ಸಮುದಾಯಕ್ಕೆ ಮೇಯರ್ ಪಟ್ಟ, ಲಿಂಗಾಯತ ಸಮುದಾಯಕ್ಕೆ ಉಪ ಮೇಯರ್ ಪಟ್ಟ ನೀಡುವ ಮೂಲಕ ಜಾತಿ ಸಮೀಕರಣದ ಟ್ರಂಪ್ ಕಾರ್ಡ್ ಪ್ರಯೋಗಿಸಿದ ಕೇಸರಿ ನಾಯಕರು.
ಬಿಜೆಪಿಯಿಂದ ಮೇಯರ್ ಸ್ಥಾನಕ್ಕೆ ಪ್ರೀತಿ ಕಾಮಕರ ಹಾಗೂ ಉಪ ಮೇಯರ್ ಸ್ಥಾನಕ್ಕೆ ಹನುಮಂತ ಕೊಂಗಾಳಿ ನಾಮಪತ್ರ ಸಲ್ಲಿಸಿದ್ದು, ಇವರ ಆಯ್ಕೆ ಬಹುತೇಕ ಖಚಿತವೆಂದು ಹೇಳಲಾಗುತ್ತಿದೆ.
ಇನ್ನೊಂದೆಡೆ ಕಾಂಗ್ರೆಸ್ ಪಕ್ಷದಿಂದ ಮೇಯರ್ ಸ್ಥಾನಕ್ಕೆ ಖರ್ಷಿದ ಮುಲ್ಲಾ ಹಾಗೂ ಉಪ ಮೇಯರ್ ಸ್ಥಾನಕ್ಕೆ ಮೋದಿನಸಾಬ್ ಮತವಾಲೆ ನಾಮಪತ್ರ ಸಲ್ಲಿಸಿದ್ದಾರೆ.
ಇಂದು ಮಧ್ಯಾಹ್ನ 1 ಗಂಟೆಗೆ ಮೇಯರ್ ಮತ್ತು ಉಪ ಮೇಯರ್ ಚುನಾವಣೆ ನಡೆಯಲಿದ್ದು, ಕೈ ಎತ್ತುವ ಮೂಲಕ ಮತದಾನ ಪ್ರಕ್ರಿಯೆ ನಡೆಯಲಿದೆ.
ಪಾಲಿಕೆಯಲ್ಲಿ ಒಟ್ಟು 58 ಸದಸ್ಯರಿದ್ದು, ಬಿಜೆಪಿ 38 ಸದಸ್ಯರೊಂದಿಗೆ ಸ್ಪಷ್ಟ ಬಹುಮತ ಹೊಂದಿದೆ. ಕಾಂಗ್ರೆಸ್ ಹಾಗೂ ಪಕ್ಷೇತರರು ಸೇರಿ 20 ಸದಸ್ಯರ ಬಲವಿದೆ.
ಈ ಹಿನ್ನೆಲೆಯಲ್ಲಿ ಮೇಯರ್ ಮತ್ತು ಉಪ ಮೇಯರ್ ಆಯ್ಕೆ ಅಧಿಕೃತ ಘೋಷಣೆ ಮಾತ್ರ ಬಾಕಿ ಉಳಿದಿದೆ.
ಬೆಳಗಾವಿ ದಕ್ಷಿಣ ಮತಕ್ಷೇತ್ರಕ್ಕೆ ಮೇಯರ್ ಸ್ಥಾನ ಹಾಗೂ ಬೆಳಗಾವಿ ಉತ್ತರ ಮತಕ್ಷೇತ್ರಕ್ಕೆ ಉಪ ಮೇಯರ್ ಸ್ಥಾನ ಹಂಚಿಕೆ ಮಾಡಲಾಗಿದ್ದು,ಮಾಜಿ ಶಾಸಕ ಅನಿಲ್ ಬೆನಕೆ ಜಾತಿ ಸಮೀಕರಣದ ಲೆಕ್ಕಾಚಾರದಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.
ಒಟ್ಟು ಮತ ಬ್ಯಾಂಕ್ ಗಮನದಲ್ಲಿಟ್ಟುಕೊಂಡು ಮೇಯರ್ ಮತ್ತು ಉಪ ಮೇಯರ್ ಆಯ್ಕೆ ಮಾಡಿದ ರಾಜಕೀಯ ತಂತ್ರ ಸ್ಪಷ್ಟವಾಗಿದೆ.

Total Views 142
RELATED ARTICLES

Most Popular

Recent Comments

KNN City News
Home
E-Paper