Monday, November 23, 2026
HomeBelagaviಹಳೆ ವೈಷ್ಯಮ್ಯಕ್ಕೆ ಮಹೇಶ್ ಕೊಲೆ: ಆರೋಪಿ ರುದ್ರಯ್ಯ ಬಂಧನ

ಹಳೆ ವೈಷ್ಯಮ್ಯಕ್ಕೆ ಮಹೇಶ್ ಕೊಲೆ: ಆರೋಪಿ ರುದ್ರಯ್ಯ ಬಂಧನ

ಬೈಲಹೊಂಗಲ
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ದೊಡವಾಡ ಗ್ರಾಮದಲ್ಲಿ ನಡೆದಿದ್ದ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿ ಬುಧವಾರ ಆರೋಪಿಯನ್ನು ಬಂಧಿಸಿದ್ದಾರೆ.
ಮಾ.17 ರಂದು ರುದ್ರಯ್ಯ ಉಜನಿಮಠ (36) ಎಂಬಾತನು ತನ್ನ ಸಂಬಂಧಿಕ ಮಹೇಶ ಉಜನಿಮಠ (33) ಅವರನ್ನು ಹತ್ಯೆ ಮಾಡಿದ್ದ.ಮನೆಯ ಮುಂದೆ ಹಾಯ್ದಾಡುವ ದಾರಿಯ ವಿಚಾರವಾಗಿ ಉಂಟಾದ ವೈಷಮ್ಯದಿಂದಾಗಿ ಇಬ್ಬರ ನಡುವೆ ಪದೇಪದೇ ಜಗಳ ನಡೆಯುತ್ತಿತ್ತು. ಘಟನೆ ದಿನ ಮಹೇಶ ಮನೆಗೆ ಬರುತ್ತಿದ್ದ ವೇಳೆ ಆರೋಪಿತನು ಕುಡಗೋಲಿನಿಂದ ಹಿಂದಿನಿಂದ ದಾಳಿ ನಡೆಸಿ ಕುತ್ತಿಗೆಗೆ ಗಂಭೀರ ಗಾಯಗೊಳಿಸಿದ್ದಾನೆ. ಪರಿಣಾಮವಾಗಿ ಮಹೇಶ ರಕ್ತಸ್ರಾವದಿಂದ ಮೃತಪಟ್ಟಿದ್ದಾನೆ.
ಈ ಕುರಿತು ದೊಡವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಕೊಂಡು ತನಿಖೆ ಕೈಗೊಂಡ ಪೊಲೀಸರು, ಹಳೆಯ ದ್ವೇಷವೇ ಕೊಲೆಗೆ ಕಾರಣವೆಂದು ಪತ್ತೆ ಹಚ್ಚಿದ್ದಾರೆ. ಮಾರ್ಚ್ 18ರಂದು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಹೆಚ್ಚುವರಿ ಪೊಲೀಸ್ ಅಧೀಕ್ಷಕ ರಾಮಗೊಂಡ ಬಸರಗಿ ಹಾಗೂ ಡಿಎಸ್ಪಿ ವೀರಯ್ಯ ಹಿರೇಮಠ ಮಾರ್ಗದರ್ಶನದಲ್ಲಿ ಸಿಪಿಐ ಶಿವಾನಂದ ಗುಡಗನಟ್ಟಿ, ಪಿಎಸ್‌ಐ ಹೆಚ್.ಕೆ ಪಾಟೀಲ ನೇತೃತ್ವದ ತಂಡ ಪ್ರಕರಣವನ್ನು ಭೇದಿಸಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಆರೋಪಿ ಬಂಧಿಸಿದ ಸಿಬ್ಬಂದಿಯನ್ನು ಶ್ಲಾಘಿಸಿದ್ದಾರೆ.

 

Total Views 220
RELATED ARTICLES

Most Popular

Recent Comments

KNN City News
Home
E-Paper