Monday, November 23, 2026
HomeBelagaviಯಗಾದಿ ಹಬ್ಬದಂದು ನಠೋರಿಯಸ್ ಗಳಿಗೆ ಶಾಕ್ ಕೊಟ್ಟ ಸಿಪಿ

ಯಗಾದಿ ಹಬ್ಬದಂದು ನಠೋರಿಯಸ್ ಗಳಿಗೆ ಶಾಕ್ ಕೊಟ್ಟ ಸಿಪಿ

ಬೆಳಗಾವಿ
ನಗರದಲ್ಲಿ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದು, ನಠೋರಿಯಸ್ ಆರೋಪಿಗಳಿಗೆ ಪೊಲೀಸ್ ಕಮೀಷನರ್ ಭೂಷಣ್ ಬೊರಸೆ ಶಾಕ್ ನೀಡಿದ್ದಾರೆ.
ಹೊಸ ವರ್ಷದ ಯುಗಾದಿ ಹಬ್ಬದ ದಿನವೇ ಮೂವರು ಆರೋಪಿಗಳನ್ನು ಬೆಳಗಾವಿ ನಗರ ಹಾಗೂ ಜಿಲ್ಲೆಯಿಂದ ಗಡಿಪಾರು ಮಾಡುವಂತೆ ಆದೇಶಿಸಲಾಗಿದೆ. ಮಟ್ಕಾ, ಜೂಜಾಟ, ಗಾಂಜಾ ಸೇರಿದಂತೆ ವಿವಿಧ ಅಕ್ರಮ ದಂಧೆಗಳಲ್ಲಿ ತೊಡಗಿದ್ದ ಆರೋಪಿಗಳ ವಿರುದ್ಧ ಈ ಕ್ರಮ ಕೈಗೊಳ್ಳಲಾಗಿದೆ.
ಗಡಿಪಾರುಗೊಳಗಾದವರು ಸರ್ಫರಾಜ್ ಶೇಖ್, ವಿನಾಯಕ ಕೊಲ್ಲಾಪುರಿ ಹಾಗೂ ಸಾಗರ ಸಾಲಗುಡೆ. ಇವರ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿದ್ದರೂ ಪದೇ ಪದೇ ಎಚ್ಚರಿಕೆ ನೀಡಿದರೂ ಚಟುವಟಿಕೆ ನಿಲ್ಲಿಸಿರಲಿಲ್ಲ.
ಈ ಹಿನ್ನೆಲೆಯಲ್ಲಿ ಆರೋಪಿಗಳನ್ನು ವಿಜಯಪುರ, ಕಾರವಾರ ಹಾಗೂ ಯಾದಗಿರಿ ಜಿಲ್ಲೆಗಳ ವ್ಯಾಪ್ತಿಗೆ 6 ತಿಂಗಳ ಕಾಲ ಗಡಿಪಾರು ಮಾಡಲಾಗಿದೆ.
ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಇಂತಹ ಕ್ರಮಗಳು ಮುಂದುವರೆಯಲಿವೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.

Total Views 70
RELATED ARTICLES

Most Popular

Recent Comments

KNN City News
Home
E-Paper