
ಬೆಳಗಾವಿ
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮೇಕಲಮರ್ಡಿ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿ ನಾಲ್ಕು ವರ್ಷದ ಮಗು ಮೃತಪಟ್ಟ ದುರ್ಘಟನೆ ಸೋಮವಾರ ನಡೆದಿದೆ.
ಚಿಕ್ಕಬೂದನೂರ ಗ್ರಾಮದ ಪುಂಡಲಿಕ ಲಿಂಬಣ್ಣ ಗಿರೆಣ್ಣವರ (4) ಮೃತಪಟ್ಟ ಮಗು ಎಂದು ಗುರುತಿಸಲಾಗಿದೆ. ತಂದೆಯೊಂದಿಗೆ ಬೈಕ್‌ನಲ್ಲಿ ನೇಸರಗಿ ಗ್ರಾಮದತ್ತ ತೆರಳುತ್ತಿದ್ದ ವೇಳೆ ಹಿಂಬದಿಯಿಂದ ವೇಗವಾಗಿ ಬಂದ ಟಿಪ್ಪರ್ ವಾಹನ ಡಿಕ್ಕಿ ಹೊಡೆದಿದೆ.
ಇಂಚಲ ಗ್ರಾಮದ ದಿಕ್ಕಿನಿಂದ ಬರುತ್ತಿದ್ದ ಟಿಪ್ಪರ್ ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣವೆಂದು ತಿಳಿದುಬಂದಿದೆ. ಡಿಕ್ಕಿಯ ಪರಿಣಾಮ ಮಗು ಸ್ಥಳದಲ್ಲೇ ಮೃತಪಟ್ಟಿದೆ, ತಂದೆಗೆ ಗಂಭೀರ ಗಾಯಗಳಾಗಿವೆ. ಗಾಯಾಳುವನ್ನು ತಕ್ಷಣ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆಯ ಬಳಿಕ ಪೊಲೀಸರು ಟಿಪ್ಪರ್ ವಾಹನವನ್ನು ವಶಕ್ಕೆ ಪಡೆದು ತನಿಖೆ ಆರಂಭಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನೇಸರಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
