Monday, November 23, 2026
HomeBelagaviಭೀಕರ ರಸ್ತೆ ಅಪಘಾತ: ಕಾರು ಚಾಲಕ ಸ್ಥಳದಲ್ಲೇ ಸಾವು

ಭೀಕರ ರಸ್ತೆ ಅಪಘಾತ: ಕಾರು ಚಾಲಕ ಸ್ಥಳದಲ್ಲೇ ಸಾವು

ಬೆಳಗಾವಿ
ಬೆಳಗಾವಿ ಜಿಲ್ಲೆಯ ಕಿತ್ತೂರು ಪಟ್ಟಣದ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಭೀಕರ ರಸ್ತೆ ಅಪಘಾತದಲ್ಲಿ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಈ ದುರ್ಘಟನೆ ನಡೆದಿದೆ. ಅಪಘಾತದ ತೀವ್ರತೆಗೆ ಸ್ವಿಫ್ಟ್ ಡಿಜೈರ್ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.
ಧಾರವಾಡ ಕಡೆಗೆ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಬೈಕ್ ಸವಾರನಿಗೆ ಗಂಭೀರವಾಗಿ ಗಾಯವಾಗಿದೆ. ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಕಿತ್ತೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Total Views 141
RELATED ARTICLES

Most Popular

Recent Comments

KNN City News
Home
E-Paper