Thursday, November 19, 2026
HomeBelagaviಸ್ವಚ್ಚ ಬೆಳಗಾವಿ ಸಂಭ್ರಮದ ಕಾರ್ಯಕ್ರಮಕ್ಕೆ ಅನುಮತಿ ನೀಡದ ಜಿಲ್ಲಾಡಳಿತ

ಸ್ವಚ್ಚ ಬೆಳಗಾವಿ ಸಂಭ್ರಮದ ಕಾರ್ಯಕ್ರಮಕ್ಕೆ ಅನುಮತಿ ನೀಡದ ಜಿಲ್ಲಾಡಳಿತ

 

ಬೆಳಗಾವಿ
ಬೆಳಗಾವಿಯಲ್ಲಿ ಮೇ.17ರಂದು 25 ಸಾವಿರಕ್ಕೂ ಹೆಚ್ಚು ಜನರನ್ನು ಸೇರಿಸಿ ಶಿವಂ ಅಸೋಸಿಯೇಷನ್ ವತಿಯಿಂದ ಆಯೋಜಿಸಲಾಗಿದ್ದ “ಸ್ವಚ್ಚ ಬೆಳಗಾವಿ ಸಂಭ್ರಮ” ಕಾರ್ಯಕ್ರಮಕ್ಕೆ ಜಿಲ್ಲಾಡಳಿತ ಅನುಮತಿ ನಿರಾಕರಿಸಿದೆ.
ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ನಗರದಲ್ಲಿನ ಪ್ರಮುಖ ವೃತ್ತಗಳಲ್ಲಿ ಮಹಾನಗರ ಪಾಲಿಕೆಯ ಪೂರ್ವಾನುಮತಿ ಪಡೆಯದೇ ಜಾಹೀರಾತು ಫಲಕಗಳು ಹಾಗೂ ಬ್ಯಾನರ್‌ಗಳನ್ನು ಅಳವಡಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಅನಧಿಕೃತವಾಗಿ ಅಳವಡಿಸಿದ್ದ ಫಲಕಗಳನ್ನು ತೆರವುಗೊಳಿಸಿದ್ದಾರೆ.
ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ರೀತಿಯ ಜಾಹೀರಾತು ಫಲಕ ಅಳವಡಿಸಲು ಪಾಲಿಕೆಯ ಅನುಮತಿ ಕಡ್ಡಾಯವಾಗಿದ್ದು, ನಿಯಮ ಉಲ್ಲಂಘನೆ ಕಂಡುಬಂದ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನೂ ಕಾರ್ಯಕ್ರಮದಲ್ಲಿ ಜಿಲ್ಲಾಡಳಿತದ ಅನುಮತಿ ಪಡೆಯದೆಯೇ ಸಿದ್ದತೆ ಮಾಡಿಕೊಂಡಿದ್ದ ಶಿವಂ ಅಸೋಸಿಯೇಷನ್ ಗೆ ಜಿಲ್ಲಾಡಳಿತ ಶಾಕ್ ನೀಡಿದೆ.

 

Total Views 109
RELATED ARTICLES

Most Popular

Recent Comments

KNN City News
Home
E-Paper