Monday, November 23, 2026
HomeBelagaviಚಿನ್ನಾಭರಣ ಕಳ್ಳತನ ಮಾಡುತ್ತಿದ್ದ ಕಳ್ಳಿಯರಿಬ್ಬರ ಬಂಧನ

ಚಿನ್ನಾಭರಣ ಕಳ್ಳತನ ಮಾಡುತ್ತಿದ್ದ ಕಳ್ಳಿಯರಿಬ್ಬರ ಬಂಧನ

ಬೆಳಗಾವಿ
ಜನದಟ್ಟಣೆಯನ್ನೇ ಬಂಡವಾಳ ಮಾಡಿಕೊಂಡು ಪ್ರಯಾಣಿಕರ ಚಿನ್ನಾಭರಣ ಕಳವು ಮಾಡುತ್ತಿದ್ದ ಅಂತಾರಾಜ್ಯ ಮಹಿಳಾ ಕಳ್ಳಿಯರನ್ನು ಅಥಣಿ ಪೊಲೀಸರು ಬಂಧಿಸಿದ್ದಾರೆ.
ಮಹಾರಾಷ್ಟ್ರ ಮೂಲದ ಹೇಮಾ ಕಸಬೇಕರ ಹಾಗೂ ನಿಲಂ ಕಾಂಬಳೆ ಎಂದು ಗುರುತಿಸಲಾಗಿದೆ. ಅಥಣಿ ಪಟ್ಟಣದ ಬಸ್ ನಿಲ್ದಾಣದಲ್ಲಿ ಅನುಮಾನಾಸ್ಪದವಾಗಿ ಸಂಚರಿಸುತ್ತಿದ್ದ ವೇಳೆ ಪೊಲೀಸರು ಬಲೆ ಬೀಸಿ ಇಬ್ಬರನ್ನೂ ಬಂಧಿಸಿದ್ದಾರೆ.
ಪೊಲೀಸರ ವಿಚಾರಣೆಯಲ್ಲಿ ವಿವಿಧ ಕಡೆ ನಡೆದ ನಾಲ್ಕು ಕಳ್ಳತನ ಪ್ರಕರಣಗಳು ಬೆಳಕಿಗೆ ಬಂದಿದ್ದು, ಸುಮಾರು 68 ಲಕ್ಷ ರೂಪಾಯಿ ಮೌಲ್ಯದ 42.5 ಗ್ರಾಂ ಚಿನ್ನಾಭರಣವನ್ನು ವಶಕ್ಕೆ ಪಡೆಯಲಾಗಿದೆ.
ಬಸ್ ಹತ್ತುವ ಹಾಗೂ ಇಳಿಯುವ ಸಮಯದಲ್ಲಿ ಉಂಟಾಗುವ ಗದ್ದಲ, ಜನದಟ್ಟಣೆ ಹಾಗೂ ತಳ್ಳಾಟವನ್ನು ಬಳಸಿಕೊಂಡು ಮಹಿಳಾ ಪ್ರಯಾಣಿಕರನ್ನು ಗುರಿಯಾಗಿಸಿಕೊಂಡು ಕಳ್ಳತನ ನಡೆಸುತ್ತಿದ್ದರು ಎಂದು ತಿಳಿದುಬಂದಿದೆ.
ಪ್ರಯಾಣಿಕರ ರೂಪದಲ್ಲಿ ಬಂದು ಕಣ್ಣಿಗೆ ಬೀಳದಂತೆ ಕಾರ್ಯಾಚರಣೆ ನಡೆಸುತ್ತಿದ್ದ ಈ ಮಹಿಳಾ ಕಳ್ಳಿಯರ ಬಂಧನದಿಂದ ಸಾರ್ವಜನಿಕರು ನಿಟ್ಟುಸಿರು ಬಿಟ್ಟಿದ್ದಾರೆ. ಆರೋಪಿಗಳ ಬಂಧನದಲ್ಲಿ ಯಶಸ್ವಿಯಾದ ಅಥಣಿ ಪೊಲೀಸರ ಕಾರ್ಯಾಚರಣೆಗೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.

 

Total Views 92
RELATED ARTICLES

Most Popular

Recent Comments

KNN City News
Home
E-Paper