Monday, November 23, 2026
HomeBelagaviನೀಲಣ್ಣವರ ವಂಚನೆ ಕೇಸ್: ಕಮಿಷ್ನರ್ ಕಚೇರಿಗೆ ಬಂದ ಸಿಐಡಿ ಡಿಐಜಿ ಗುಳೇದ್

ನೀಲಣ್ಣವರ ವಂಚನೆ ಕೇಸ್: ಕಮಿಷ್ನರ್ ಕಚೇರಿಗೆ ಬಂದ ಸಿಐಡಿ ಡಿಐಜಿ ಗುಳೇದ್

ಬೆಳಗಾವಿ
ಬೆಳಗಾವಿಯಲ್ಲಿ ನಡೆದಿರುವ 4,500 ಕೋಟಿ ರೂಪಾಯಿ ವಂಚನೆ ಆರೋಪ ಪ್ರಕರಣ ಇದೀಗ ಮತ್ತಷ್ಟು ಮಹತ್ವದ ಹಂತ ತಲುಪಿದೆ. ಪ್ರಕರಣವನ್ನು ಸಿಐಡಿಗೆ ಹಸ್ತಾಂತರಿಸುವ ಸಂಬಂಧ ಬೆಳಗಾವಿ ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಭಾನುವಾರ ಮಹತ್ವದ ಸಭೆ ನಡೆಯುತ್ತಿದೆ.
ಸಭೆಗೆ ಸಿಐಡಿ ಡಿಐಜಿ ಡಾ. ಭೀಮಾಶಂಕರ್ ಗುಳೇದ್ ನೇತೃತ್ವದ ಮೂವರು ಅಧಿಕಾರಿಗಳ ತಂಡ ಆಗಮಿಸಿದ್ದು, ತನಿಖೆಯ ಮುಂದಿನ ದಿಕ್ಕಿನ ಬಗ್ಗೆ ಚರ್ಚೆ ನಡೆಸುತ್ತಿದೆ. ಸಿಐಡಿ ಅಧಿಕಾರಿಗಳ ಆಗಮನಕ್ಕೂ ಮುನ್ನವೇ ನಗರ ಪೊಲೀಸ್ ಆಯುಕ್ತ ಭೂಷಣ್ ಬೊರಸೆ ಕಚೇರಿಗೆ ಆಗಮಿಸಿ ಹಿರಿಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು.
ಸಭೆಯಲ್ಲಿ ಮಾರ್ಕೆಟ್ ಎಸಿಪಿ, ಮಾಳಮಾರುತಿ ಠಾಣೆಯ ಸಿಪಿಐ, ಸಿಇಎನ್ ಪೊಲೀಸ್ ಠಾಣೆಯ ಸಿಪಿಐ ಸೇರಿದಂತೆ ತನಿಖೆಗೆ ಸಂಬಂಧಿಸಿದ ಅಧಿಕಾರಿಗಳು ಭಾಗಿಯಾಗಿದ್ದಾರೆ. ಈವರೆಗೆ ಬೆಳಗಾವಿ ಪೊಲೀಸರು ನಡೆಸಿರುವ ತನಿಖೆಯ ಸಂಪೂರ್ಣ ಮಾಹಿತಿ, ಜಪ್ತಿ ಮಾಡಿರುವ ದಾಖಲೆಗಳು, ಡಿಜಿಟಲ್ ಸಾಕ್ಷ್ಯಗಳು, ಬ್ಯಾಂಕ್ ವ್ಯವಹಾರಗಳ ಮಾಹಿತಿ ಸೇರಿದಂತೆ ಮಹತ್ವದ ದಾಖಲೆಗಳನ್ನು ಸಿಐಡಿ ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ವಶಪಡಿಸಿಕೊಂಡಿರುವ ಲ್ಯಾಪ್‌ಟಾಪ್, ಮೊಬೈಲ್, ಹಾರ್ಡ್ ಡಿಸ್ಕ್ ಹಾಗೂ ಆನ್‌ಲೈನ್ ವ್ಯವಹಾರಗಳ ಡಿಜಿಟಲ್ ದಾಖಲೆಗಳ ಬಗ್ಗೆ ವಿಶೇಷವಾಗಿ ಮಾಹಿತಿ ಪಡೆಯಲಾಗುತ್ತಿದೆ. ಸಭೆ ಮುಕ್ತಾಯವಾದ ತಕ್ಷಣವೇ ತನಿಖೆಗೆ ಸಂಬಂಧಿಸಿದ ದಾಖಲೆಗಳನ್ನು ಸಿಐಡಿ ಅಧಿಕೃತವಾಗಿ ವಶಕ್ಕೆ ಪಡೆಯುವ ಸಾಧ್ಯತೆ ಇದೆ.
ಬಹುಕೋಟಿ ವಂಚನೆ ಆರೋಪದ ಹಿನ್ನೆಲೆಯಲ್ಲಿ ಪ್ರಕರಣ ರಾಜ್ಯ ಮಟ್ಟದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಸಿಐಡಿ ತನಿಖೆಯಿಂದ ಇನ್ನಷ್ಟು ಮಹತ್ವದ ಮಾಹಿತಿ ಬಹಿರಂಗವಾಗುವ ನಿರೀಕ್ಷೆ ಮೂಡಿದೆ.

Total Views 127
RELATED ARTICLES

Most Popular

Recent Comments

KNN City News
Home
E-Paper