Monday, November 23, 2026
HomeBelagaviಜೆಡಿಎಸ್ ಗೆ ಕೋಟೆ ಬಲ

ಜೆಡಿಎಸ್ ಗೆ ಕೋಟೆ ಬಲ

ಬೆಳಗಾವಿ
ಮಹಾರಾಷ್ಟ್ರ ರಾಜ್ಯದ ಸೊಲಾಪುರ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷದ ವಿಶೇಷ ಚೇತನರ ವಿಭಾಗಕ್ಕೆ ನೂತನ ಅಧ್ಯಕ್ಷರನ್ನು ಮಹಾಸಿದ್ಧ ಕೋಟೆ ನೇಮಕ ಮಾಡಲಾಗಿದೆ.
ಕರ್ನಾಟಕ ಗಡಿಭಾಗಕ್ಕೆ ಹೊಂದಿಕೊಂಡಿರುವ ಸೊಲಾಪುರ ಜಿಲ್ಲೆಯಲ್ಲಿ ಕನ್ನಡಿಗರ ಸಂಖ್ಯೆ ಅಧಿಕವಾಗಿದ್ದು, ಜೆಡಿಎಸ್ ಪಕ್ಷಕ್ಕೆ ಉತ್ತಮ ಬೆಂಬಲ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಈ ನೇಮಕಾತಿ ಮಾಡಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಪಕ್ಷದ ಸಂಘಟನೆ ಬಲಪಡಿಸುವ ಉದ್ದೇಶದಿಂದ ವಿಶೇಷ ಚೇತನರ ವಿಭಾಗದ ಜಿಲ್ಲಾಧ್ಯಕ್ಷರಾಗಿ ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ. ನೂತನ ಅಧ್ಯಕ್ಷರು ಪಕ್ಷದ ತತ್ವ ಹಾಗೂ ಸಿದ್ಧಾಂತಗಳಿಗೆ ಬದ್ಧರಾಗಿ ಕಾರ್ಯನಿರ್ವಹಿಸಿ, ಜಿಲ್ಲೆಯ ವಿಶೇಷ ಚೇತನರ ಮುಖಂಡರು ಮತ್ತು ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಂಘಟನೆ ವಿಸ್ತರಣೆಗೆ ಶ್ರಮಿಸಲಿದ್ದಾರೆ ಎಂದು ತಿಳಿಸಲಾಗಿದೆ.
ಪಕ್ಷದ ರಾಷ್ಟ್ರೀಯ ನಾಯಕ ಎಚ್.ಡಿ.ದೇವೇಗೌಡ ರಾಜ್ಯ ನಾಯಕ ಎಚ್.ಡಿ.ಕುಮಾರಸ್ವಾಮಿ ಮಾರ್ಗದರ್ಶನದಲ್ಲಿ ಪಕ್ಷದ ಚಟುವಟಿಕೆಗಳನ್ನು ಮತ್ತಷ್ಟು ಬಲಪಡಿಸುವ ನಿರೀಕ್ಷೆಯನ್ನು ನಾಯಕರು ವ್ಯಕ್ತಪಡಿಸಿದ್ದಾರೆ.
ನೂತನ ಜಿಲ್ಲಾಧ್ಯಕ್ಷರ ನೇಮಕಕ್ಕೆ ಪಕ್ಷದ ಕಾರ್ಯಕರ್ತರು ಹಾಗೂ ಬೆಂಬಲಿಗರು ಅಭಿನಂದನೆ ಸಲ್ಲಿಸಿದ್ದಾರೆ.

Total Views 23
RELATED ARTICLES

Most Popular

Recent Comments

KNN City News
Home
E-Paper