Monday, November 23, 2026
HomeBelagaviಕುತೂಹಲ ಘಟಕ್ಕೆ ಬಂದ ನೀಲಣ್ಣವ ವಂಚನೆ ಕೇಸ್

ಕುತೂಹಲ ಘಟಕ್ಕೆ ಬಂದ ನೀಲಣ್ಣವ ವಂಚನೆ ಕೇಸ್

ಬೆಳಗಾವಿ
4,500 ಕೋಟಿ ರೂಪಾಯಿ ವಂಚನೆ ಆರೋಪ ಎದುರಿಸುತ್ತಿರುವ ಶಿವಂ ಅಸೋಸಿಯೇಟ್ಸ್ ಸಂಸ್ಥೆಯ ಮುಖ್ಯಸ್ಥ ಶಿವಾನಂದ ನೀಲಣ್ಣವರಗೆ ಸಿಐಡಿ ಅಧಿಕಾರಿಗಳು ಸೋಮವಾರ ತಡರಾತ್ರಿ ಬೆಂಗಳೂರಿನಿಂದ ಬೆಳಗಾವಿಗೆ ಕರೆತಂದಿದ್ದಾರೆ.
ನೀಲಣ್ಣವರ್ ಮಾಳಮಾರುತಿ ಪೊಲೀಸ್ ಠಾಣೆಗೆ ಕರೆತಂದು ವಿಚಾರಣೆ ನಡೆಸಲಾಗುತ್ತಿದ್ದು, ನ್ಯಾಯಾಲಯವು ನೀಡಿದ್ದ 10 ದಿನಗಳ ಸಿಐಡಿ ಕಸ್ಟಡಿ ಅವಧಿ ಮೇ 27ರಂದು ಅಂತ್ಯಗೊಳ್ಳಲಿರುವ ಹಿನ್ನೆಲೆಯಲ್ಲಿ ಒಂದು ದಿನ ಮುಂಚಿತವಾಗಿಯೇ ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆ ಇದೆ. ನಾಳೆ ನ್ಯಾಯಾಲಯಕ್ಕೆ ರಜೆ ಇರುವ ಕಾರಣ ಇಂದೇ ನ್ಯಾಯಾಧೀಶರ ಮುಂದೆ ಹಾಜರುಪಡಿಸಲು ಸಿಐಡಿ ಸಿದ್ಧತೆ ನಡೆಸಿದೆ ಎನ್ನಲಾಗಿದೆ.
ಇದೇ ವೇಳೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೀಲಣ್ಣವರ್ ಪತ್ನಿ, ನಟ ಆರ್. ಅಭಿಲಾಷ್ ಹಾಗೂ ವ್ಯವಹಾರ ಪಾಲುದಾರ ಸುಭಾಷ್ ಅವರಿಗೆ ಸಿಐಡಿ ನೋಟಿಸ್ ಜಾರಿಗೊಳಿಸಿತ್ತು. ತನಿಖೆಗೆ ಹಾಜರಾಗುವಂತೆ ಸೂಚನೆ ನೀಡಿದ್ದ ಹಿನ್ನೆಲೆಯಲ್ಲಿ ಮೂವರೂ ಮಂಗಳವಾರ ಮಾಳಮಾರುತಿ ಠಾಣೆಯಲ್ಲಿ ಸಿಐಡಿ ಅಧಿಕಾರಿಗಳ ಮುಂದೆ ಹಾಜರಾಗಿದ್ದಾರೆ. ಅವರಿಂದಲೂ ಮಹತ್ವದ ಮಾಹಿತಿ ಸಂಗ್ರಹಿಸಲಾಗುತ್ತಿದೆ.
ಪ್ರಕರಣದ ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿರುವ ಸಿಐಡಿ, ಹೂಡಿಕೆದಾರರ ಹಣ ಬಳಸಿ ಖರೀದಿಸಲಾಗಿದೆ ಎನ್ನಲಾದ ಐಷಾರಾಮಿ ವಾಹನಗಳ ಜಪ್ತಿಗೂ ಮುಂದಾಗಿದೆ. ಕೋಟ್ಯಂತರ ರೂಪಾಯಿ ಮೌಲ್ಯದ ಡಿಫೆಂಡರ್, ಮರ್ಸಿಡಿಸ್ ಬೆಂಝ್ ಹಾಗೂ ವೆಲ್‌ಫೈರ್ ಕಾರುಗಳನ್ನು ವಶಪಡಿಸಿಕೊಳ್ಳುವ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಬಹುಕೋಟಿ ವಂಚನೆ ಪ್ರಕರಣದಲ್ಲಿ ಸಿಐಡಿ ತನಿಖೆ ನಿರ್ಣಾಯಕ ಹಂತ ತಲುಪಿದ್ದು, ಮುಂದಿನ ಬೆಳವಣಿಗೆಗಳತ್ತ ಹೂಡಿಕೆದಾರರು ಹಾಗೂ ಸಾರ್ವಜನಿಕರು ಕುತೂಹಲದಿಂದ ಕಾದು ನೋಡುತ್ತಿದ್ದಾರೆ.

 

Total Views 182
RELATED ARTICLES

Most Popular

Recent Comments

KNN City News
Home
E-Paper