
ಬೆಳಗಾವಿ
ಯೂಟ್ಯೂಬ್ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಪ್ರಚಾರ ಮಾಡುವುದಾಗಿ ಬೆದರಿಸಿ 20 ಲಕ್ಷಕ್ಕೆ ಬೇಡಿಕೆ ಇಟ್ಟ ಆರೋಪದ ಮೇಲೆ ಮೂವರ ವಿರುದ್ಧ ಖಡೇಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜನತಾ ಆಯುರ್ವೇದ ಅಂಗಡಿ ಮಾಲೀಕ ದುರ್ಗರಾಜ ವೈದ್ಯ ನೀಡಿದ ದೂರಿನ ಮೇರೆಗೆ ಏಕನಾಥ ಕೋಲಕಾರ, ವಿರೇಶ ಮಠಪತಿ ಹಾಗೂ ಸಿದ್ದು ಸಿದ್ದಪ್ಪನವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಮೇ 19ರಂದು ಆರೋಪಿಗಳು ಕಳಪೆ ಔಷಧ ಮಾರಾಟ ಮಾಡುತ್ತಿರುವುದಾಗಿ ಸುಳ್ಳು ಪ್ರಚಾರ ಮಾಡುವ ಬೆದರಿಕೆ ಹಾಕಿ ಹಣಕ್ಕೆ ಬೇಡಿಕೆ ಇಟ್ಟಿದ್ದು, ಜೀವ ಬೆದರಿಕೆಯನ್ನೂ ಒಡ್ಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಪೊಲೀಸರು ತನಿಖೆ ಕೈಗೊಂಡಿದ್ದಾರೆ.
