Monday, November 23, 2026
HomeBelagaviಠೇವಣಿದಾರರಿಗೆ ವಂಚನೆ ಆರೋಪ ಆಧಿತ್ಯರಾಜ್ ಕ್ಯಾಪಿಟಲ್ ಮೇಲೆ ಎಸಿ ದಾಳಿ

ಠೇವಣಿದಾರರಿಗೆ ವಂಚನೆ ಆರೋಪ ಆಧಿತ್ಯರಾಜ್ ಕ್ಯಾಪಿಟಲ್ ಮೇಲೆ ಎಸಿ ದಾಳಿ

 

ಬೆಳಗಾವಿ
ಠೇವಣಿದಾರರಿಗೆ ವಂಚನೆ ಮಾಡಿರುವ ಆರೋಪ ಎದುರಿಸುತ್ತಿರುವ ಆದಿತ್ಯರಾಜ್ ಕ್ಯಾಪಿಟಲ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಮೇಲೆ ಬೆಳಗಾವಿ ಉಪವಿಭಾಗಾಧಿಕಾರಿ ಶರವಣ ನಾಯಕ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಗುರುವಾರ ದಾಳಿ ನಡೆಸಿದೆ.
ನಗರದ ಭಾಗ್ಯನಗರದಲ್ಲಿರುವ ಸಂಸ್ಥೆಯು ಯಾವುದೇ ಸಮರ್ಪಕ ಭದ್ರತೆ ನೀಡದೇ ಹೆಚ್ಚಿನ ಬಡ್ಡಿದರದ ಆಮಿಷವೊಡ್ಡಿ ಸಾರ್ವಜನಿಕರಿಂದ ಠೇವಣಿಗಳನ್ನು ಸಂಗ್ರಹಿಸಿ, ಆ ಹಣವನ್ನು ಬೇರೆಡೆ ಹೂಡಿಕೆ ಮಾಡಿರುವ ಆರೋಪ ಕೇಳಿಬಂದಿದೆ. ಈ ಸಂಬಂಧ ಸಂಸ್ಥೆಯ ವಿರುದ್ಧ ಕೆಪಿಐಡಿ ಹಾಗೂ ಬಡ್ಸ್ ಸೆಲ್‌ನಲ್ಲಿ ದೂರು ದಾಖಲಾಗಿತ್ತು.
ದೂರಿನ ಆಧಾರದ ಮೇಲೆ ಉಪವಿಭಾಗಾಧಿಕಾರಿ ನೇತೃತ್ವದ ತಂಡ ಸಂಸ್ಥೆಯ ಕಚೇರಿಗೆ ಭೇಟಿ ನೀಡಿ ದಾಖಲೆಗಳ ಪರಿಶೀಲನೆ ನಡೆಸಿತು. ದಾಳಿಯ ವೇಳೆ ಟಿಳಕವಾಡಿ ಪೊಲೀಸ್ ಠಾಣೆಯ ಸಿಬ್ಬಂದಿ ಭದ್ರತೆ ಒದಗಿಸಿದರು.
ಸಂಸ್ಥೆಯ ಹಣಕಾಸು ವ್ಯವಹಾರಗಳು ಹಾಗೂ ಠೇವಣಿದಾರರ ಹಣದ ಬಳಕೆ ಕುರಿತು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದು, ತನಿಖೆಯ ಬಳಿಕ ಹೆಚ್ಚಿನ ಮಾಹಿತಿ ಹೊರಬೀಳುವ ಸಾಧ್ಯತೆ ಇದೆ.

Total Views 921
RELATED ARTICLES

Most Popular

Recent Comments

KNN City News
Home
E-Paper