Monday, November 23, 2026
HomeBelagaviಇನ್‌ಸ್ಟಾಗ್ರಾಂನಲ್ಲಿ ಅಪ್ರಾಪ್ತರ ಖಾಸಗಿ ಚಿತ್ರ ಬಿಟ್ಟವನ ವಿರುದ್ಧ ಬಿತ್ತು ಕೇಸ್

ಇನ್‌ಸ್ಟಾಗ್ರಾಂನಲ್ಲಿ ಅಪ್ರಾಪ್ತರ ಖಾಸಗಿ ಚಿತ್ರ ಬಿಟ್ಟವನ ವಿರುದ್ಧ ಬಿತ್ತು ಕೇಸ್

ಬೆಳಗಾವಿ
ನಗರದಲ್ಲಿ ಇನ್‌ಸ್ಟಾಗ್ರಾಂ ಸಾಮಾಜಿಕ ಜಾಲತಾಣದ ಮೂಲಕ ಅಪ್ರಾಪ್ತರ ಖಾಸಗಿ ವಿಡಿಯೋ ಅಪ್ಲೋಡ್ ಮಾಡಿರುವ ಗಂಭೀರ ಆರೋಪದ ಹಿನ್ನೆಲೆಯಲ್ಲಿ ಅಪರಿಚಿತ ವ್ಯಕ್ತಿಯ ವಿರುದ್ಧ ನಗರ ಸಿಇಎನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
‘ಸೌರಭ್-ಎಚ್’ ಎಂಬ ಇನ್‌ಸ್ಟಾಗ್ರಾಂ ಖಾತೆಯ ಮೂಲಕ ಕಳೆದ ಜನವರಿ 9ರಂದು ಅಪ್ರಾಪ್ತರಿಗೆ ಸಂಬಂಧಿಸಿದ ಖಾಸಗಿ ವಿಡಿಯೋವನ್ನು ಲಿಂಕ್ ಸಹಿತ ಅಪ್ಲೋಡ್ ಮಾಡಲಾಗಿದೆ ಎಂದು ತಿಳಿದುಬಂದಿದೆ. ಈ ವಿಚಾರ ಬೆಳಕಿಗೆ ಬರುತ್ತಿದ್ದಂತೆ ಸಂಬಂಧಪಟ್ಟವರು ಪೊಲೀಸರಿಗೆ ದೂರು ನೀಡಿದ್ದಾರೆ.
ಪ್ರಕರಣದ ಗಂಭೀರತೆಯನ್ನು ಪರಿಗಣಿಸಿರುವ ಸೈಬರ್ ಸಿಇಎನ್ ಪೊಲೀಸರು ತಕ್ಷಣವೇ ತನಿಖೆ ಆರಂಭಿಸಿದ್ದು, ಸಂಬಂಧಿತ ಇನ್‌ಸ್ಟಾಗ್ರಾಂ ಖಾತೆಯ ಮಾಹಿತಿಯನ್ನು ಸಂಗ್ರಹಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಖಾತೆ ನಿರ್ವಹಿಸುತ್ತಿರುವ ವ್ಯಕ್ತಿಯ ಪತ್ತೆಗೆ ತಾಂತ್ರಿಕ ಮಾಹಿತಿ ಆಧರಿಸಿ ಶೋಧ ಕಾರ್ಯ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಅಪ್ರಾಪ್ತರ ಗೌಪ್ಯತೆಗೆ ಧಕ್ಕೆ ತರುವ ರೀತಿಯ ವಿಷಯಗಳನ್ನು ಹಂಚಿಕೊಳ್ಳುವುದು ಕಾನೂನುಬಾಹಿರವಾಗಿದ್ದು, ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಲಾಗುತ್ತದೆ ಎಂದು ಸೈಬರ್ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

Total Views 59
RELATED ARTICLES

Most Popular

Recent Comments

KNN City News
Home
E-Paper