Monday, November 23, 2026
HomeBelagaviಭರಮ್ಯಾನಟ್ಟಿ ಮನೆ ಧ್ವಂಸ ಪ್ರಕರಣ: ಮೂವರು ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸ್

ಭರಮ್ಯಾನಟ್ಟಿ ಮನೆ ಧ್ವಂಸ ಪ್ರಕರಣ: ಮೂವರು ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸ್

ಬೆಳಗಾವಿ
ವಿವಾಹಿತೆಯನ್ನು ಓಡಿಸಿಕೊಂಡು ಹೋದ ಘಟನೆಗೆ ಸಂಬಂಧಿಸಿದಂತೆ ಯುವಕನ ಮನೆಯ ಮೇಲೆ ದಾಳಿ ನಡೆಸಿ ಧ್ವಂಸಗೊಳಿಸಿದ್ದ ಪ್ರಕರಣದಲ್ಲಿ ಪ್ರಮುಖ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬೆಳಗಾವಿ ತಾಲೂಕಿನ ಭರಮ್ಯಾನಟ್ಟಿ ಗ್ರಾಮದಲ್ಲಿ ಕೆಲ ದಿನಗಳ ಹಿಂದೆ ಈ ಘಟನೆ ನಡೆದಿತ್ತು. ವಿವಾಹಿತೆ ನಾಗವ್ವಳನ್ನು ಓಡಿಸಿಕೊಂಡು ಹೋದ ಆರೋಪದ ಹಿನ್ನೆಲೆ ಯಲ್ಲಪ್ಪನ ಮನೆ ಮೇಲೆ ನೂರಾರು ಜನರು ದಾಳಿ ನಡೆಸಿ ಮನೆಯಲ್ಲಿ ಇದ್ದ ಸಾಮಗ್ರಿಗಳನ್ನು ಧ್ವಂಸಗೊಳಿಸಿದ್ದರು.
ಪ್ರಕರಣ ಸಂಬಂಧ ಯಲ್ಲಪ್ಪನ ತಂದೆ ನೀಡಿದ ದೂರಿನ ಮೇರೆಗೆ ಆರೋಪಿಗಳಾದ ನಾಗರಾಜ್ ನಾಯಕ, ರವಿ ಬೀಜಗತ್ತಿ ಹಾಗೂ ಈಶ್ವರ ಮುಚ್ಚಂಡಿ ಸೇರಿದಂತೆ ಹಲವರ ವಿರುದ್ಧ ಪ್ರಕರಣ ದಾಖಲಾಗಿತ್ತು.
ಪ್ರಕರಣ ದಾಖಲಾದ ತಕ್ಷಣ ಕಾರ್ಯಾಚರಣೆ ಕೈಗೊಂಡ ಮಾರಿಹಾಳ ಪೊಲೀಸರು ಪ್ರಮುಖ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಮೂವರು ಆರೋಪಿಗಳು ನಾಗವ್ವ ಹಾಗೂ ಆಕೆಯ ಪತಿ ಬಸಪ್ಪನ ಸಂಬಂಧಿಕರು ಎಂದು ತಿಳಿದುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇತರ ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದ್ದು, ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

Total Views 121
RELATED ARTICLES

Most Popular

Recent Comments

KNN City News
Home
E-Paper