
ಬೆಳಗಾವಿ
ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬೆಳಗಾವಿ ಸಿಸಿಬಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ನಗರದ ಎಪಿಎಂಸಿ ಕಾಂಪ್ಲೆಕ್ಸ್ ಸಮೀಪ ಹೆರಾಯಿನ್ ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ದಾಳಿ ನಡೆಸಿ, ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದರು.
ಬಂಧಿತ ಆರೋಪಿಗಳನ್ನು ಮಹಾದೇವ ಪಾಟೀಲ್ ಹಾಗೂ ವಿನಾಯಕ ಖಂಡಾಳೆ ಎಂದು ಗುರುತಿಸಲಾಗಿದೆ. ಆರೋಪಿಗಳಿಂದ ಸುಮಾರು 5 ಲಕ್ಷ ರೂ. ಮೌಲ್ಯದ 24.80 ಗ್ರಾಂ ಹೆರಾಯಿನ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈ ಕಾರ್ಯಾಚರಣೆಯ ಮೂಲಕ ನಗರದಲ್ಲಿ ನಡೆಯುತ್ತಿದ್ದ ಮಾದಕ ವಸ್ತು ಮಾರಾಟ ಜಾಲಕ್ಕೆ ಸಿಸಿಬಿ ಪೊಲೀಸರು ಬಿಗಿ ಹೊಡೆತ ನೀಡಿದ್ದಾರೆ. ಬಂಧಿತ ಆರೋಪಿಗಳ ವಿರುದ್ಧ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
