Monday, November 23, 2026
HomeBelagaviನಾಡಿದ್ದು ಬೆಳಗಾವಿಗೆ ಸಿಎಂ ಡಿಕೆಶಿ ಆಗಮನ

ನಾಡಿದ್ದು ಬೆಳಗಾವಿಗೆ ಸಿಎಂ ಡಿಕೆಶಿ ಆಗಮನ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆದ ಮೇಲೆ ಇದೇ ಮೊದಲ ಬಾರಿಗೆ ಜು 9 ಗುರುವಾರ ಬೆಳಗಾವಿ ಜಿಲ್ಲೆಗೆ ಭೇಟಿ ನೀಡಲಿದ್ದಾರೆ.
ಈ ವೇಳೆ ಬೆಳಗಾವಿ ಪ್ರಾದೇಶಿಕ ವಿಭಾಗದ ವ್ಯಾಪ್ತಿಯಲ್ಲಿನ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಅಧಿಕಾರಿಗಳಿಗೆ ಅಗತ್ಯ ನಿರ್ದೇಶನಗಳನ್ನು ನೀಡಲಿದ್ದಾರೆ.
ಮುಖ್ಯಮಂತ್ರಿಗಳು ಗುರುವಾರ ಬೆಳಿಗ್ಗೆ 10.10 ಗಂಟೆಗೆ ವಿಶೇಷ ವಿಮಾನದ ಮೂಲಕ ಬೆಂಗಳೂರಿನಿಂದ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಅಲ್ಲಿಂದ ರಸ್ತೆ ಮಾರ್ಗವಾಗಿ 10.30 ಗಂಟೆಗೆ ಸುವರ್ಣ ವಿಧಾನಸೌಧಕ್ಕೆ ತೆರಳಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಸಭೆಯ ಬಳಿಕ ಮಧ್ಯಾಹ್ನ 3.20 ಗಂಟೆಗೆ ಬೆಂಗಳೂರಿಗೆ ವಿಶೇಷ ವಿಮಾನದ ಮೂಲಕ ತೆರಳಲಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

Total Views 18
RELATED ARTICLES

Most Popular

Recent Comments

KNN City News
Home
E-Paper