
ನಿಪ್ಪಾಣಿ
ರಾಷ್ಟ್ರೀಯ ಹೆದ್ದಾರಿ–48ರ ಸ್ಥವನಿಧಿ ಘಾಟ್ ಬಳಿ ಕಾರು ಹಾಗೂ ಟ್ರಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ಮೃತರನ್ನು ಮಹಾರಾಷ್ಟ್ರದ ಕೊಲ್ಲಾಪುರ ನಿವಾಸಿ ಸೋಯಲ್ ಮುನೇರ (36) ಹಾಗೂ ಇಂಚಲಕರಂಜಿ ಗ್ರಾಮದ ವಿನಯ ಪಾಟೀಲ ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಬ್ರೇಕ್ ಫೇಲ್ ಆಗಿ ಟ್ರಕ್ ಮುಂದೆ ಸಾಗುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದಾರೆ.ನಿಪ್ಪಾಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
