Monday, November 23, 2026
HomeBelagaviಮಳೆ ಕೊರತೆಯಿಂದ ಕೆಲವೆಡೆ ಬೆಳೆ ಹಾನಿಯಾಗಿದೆ: ಸಚಿವ ಸತೀಶ್

ಮಳೆ ಕೊರತೆಯಿಂದ ಕೆಲವೆಡೆ ಬೆಳೆ ಹಾನಿಯಾಗಿದೆ: ಸಚಿವ ಸತೀಶ್

ಬೆಳಗಾವಿ
ಮಳೆ ಕೊರತೆಯಿಂದ ಕೆಲವೆಡೆ ಬೆಳೆ ಹಾನಿಯಾಗಿದೆ. ಸಮೀಕ್ಷೆ ನಡೆಸಿ ವರದಿ ಬಂದ ಬಳಿಕ ಪರಿಹಾರ ಸೇರಿದಂತೆ ರೈತರಿಗೆ ಅಗತ್ಯ ಕ್ರಮಗಳ ಬಗ್ಗೆ ನಿರ್ಧರಿಸಲಾಗುವುದು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೋಳಿ ಹೇಳಿದರು.
ಚಿಕ್ಕೋಡಿಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಇತರೆ ಭಾಗಗಳಿಗೆ ಹೋಲಿಸಿದರೆ ಚಿಕ್ಕೋಡಿ ಭಾಗದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದೆ. ಆದರೂ ಕುಡಿಯುವ ನೀರಿನ ಸಮಸ್ಯೆ ಎದುರಾಗಿಲ್ಲ. ಮುಂದಿನ ದಿನಗಳಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ ಎಂದರು.
ಮಳೆ ಕೊರತೆಯಿಂದ ಹಲವೆಡೆ ಬೆಳೆ ಹಾನಿಯಾಗಿರುವ ಮಾಹಿತಿ ಇದೆ. ಸಂಬಂಧಪಟ್ಟ ಅಧಿಕಾರಿಗಳು ಸಮೀಕ್ಷೆ ನಡೆಸಿದ ಬಳಿಕ ಸರ್ಕಾರ ಪರಿಸ್ಥಿತಿಯನ್ನು ಪರಿಶೀಲಿಸಿ ಪರಿಹಾರ ಸೇರಿದಂತೆ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ ಕೈಗೊಳ್ಳಲಿದೆ ಎಂದು ಹೇಳಿದರು.
ಚಿಕ್ಕೋಡಿಯನ್ನು ಪ್ರತ್ಯೇಕ ಜಿಲ್ಲೆಯನ್ನಾಗಿಸುವ ಪ್ರಶ್ನೆಗೆ ಉತ್ತರಿಸಿ, ಜಿಲ್ಲೆಗಳ ಪುನರ್‌ರಚನೆ ಹಾಗೂ ಆಡಳಿತಾತ್ಮಕ ಬದಲಾವಣೆಗಳ ಕುರಿತು ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಯುತ್ತಿದೆ. ಚಿಕ್ಕೋಡಿ ಜಿಲ್ಲೆ ವಿಚಾರವೂ ಚರ್ಚೆಯಲ್ಲಿದ್ದು, ಸೂಕ್ತ ಸಮಯದಲ್ಲಿ ಸರ್ಕಾರ ನಿರ್ಧಾರ ಪ್ರಕಟಿಸಲಿದೆ ಎಂದರು.
ಬೆಳಗಾವಿಯಲ್ಲಿ ನಡೆಯಲಿರುವ ಆರ್‌ಎಸ್‌ಎಸ್ ಸಭೆ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಅವರು, ಆ ವಿಚಾರದ ಬಗ್ಗೆ ನನಗೆ ಮಾಹಿತಿ ಇಲ್ಲ. ಮುಂದೆ ಏನಾಗುತ್ತದೆ ಎಂಬುದನ್ನು ಕಾದು ನೋಡಬೇಕು ಎಂದರಿ.
ಹಿರಿಯ ಹಿನ್ನೆಲೆ ಗಾಯಕಿ ಎಸ್. ಜಾನಕಿ ಅವರು ಶ್ರೇಷ್ಠ ಗಾಯಕಿ. ಅವರ ಅಗಲಿಕೆ ಕರ್ನಾಟಕ ಸೇರಿದಂತೆ ಸಂಗೀತ ಲೋಕಕ್ಕೆ ತುಂಬಲಾರದ ನಷ್ಟ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಸಂತಾಪ ಸೂಚಿಸಿದರು.

Total Views 52
RELATED ARTICLES

Most Popular

Recent Comments

KNN City News
Home
E-Paper