Monday, November 23, 2026
HomeBelagaviಕುಟುಂಬದ ಜಗಳಕ್ಕೆ ಸಹೋದರರನ್ನು ಕೊಚ್ಚಿ ಕೊಲೆ ಮಾಡಿದ ಕಿರಾತಕರು

ಕುಟುಂಬದ ಜಗಳಕ್ಕೆ ಸಹೋದರರನ್ನು ಕೊಚ್ಚಿ ಕೊಲೆ ಮಾಡಿದ ಕಿರಾತಕರು

ಬೆಳಗಾವಿ
ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ನುಗ್ಗಾನಟ್ಟಿ ಗ್ರಾಮದಲ್ಲಿ ಕೌಟುಂಬಿಕ ವಿಚಾರಕ್ಕೆ ಸಂಬಂಧಿಸಿದ ಕ್ಷುಲ್ಲಕ ಕಾರಣದ ಜಗಳ ಇಬ್ಬರು ಸಹೋದರರ ಬರ್ಬರ ಹತ್ಯೆಯಲ್ಲಿ ಅಂತ್ಯಗೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಮೃತರನ್ನು ಲಗಮಪ್ಪ ರಾಮಣ್ಣವರ (32) ಹಾಗೂ ಬಸಪ್ಪ ರಾಮಣ್ಣವರ (38) ಎಂದು ಗುರುತಿಸಲಾಗಿದೆ. ಕೌಟುಂಬಿಕ ವಿಚಾರಕ್ಕೆ ಸಂಬಂಧಿಸಿದಂತೆ ಸಹೋದರರು ಹಾಗೂ ಸಂಬಂಧಿಕರ ನಡುವೆ ಆರಂಭವಾದ ವಾಗ್ವಾದ ಕ್ಷಣಾರ್ಧದಲ್ಲಿ ತೀವ್ರ ಸ್ವರೂಪ ಪಡೆದುಕೊಂಡಿದೆ. ಈ ವೇಳೆ ಸುಮಾರು ಆರು ಮಂದಿ ಸೇರಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಪರಿಣಾಮ ಇಬ್ಬರು ಸಹೋದರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನೆಯಿಂದ ನುಗ್ಗಾನಟ್ಟಿ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಮಾಹಿತಿ ತಿಳಿಯುತ್ತಿದ್ದಂತೆ ಮುರಗೋಡ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿ ಅಂತ್ಯಕ್ರಿಯೆ ನೆರವೆರಿಸಲಾಗಿದೆ.
ಈ ಕುರಿತು ಮುರಗೋಡ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆ ಹಾಗೂ ಹತ್ಯೆಗೆ ಕಾರಣವಾದ ನಿಖರ ಹಿನ್ನೆಲೆಯನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಸರಗಿ, ಮುರಗೋಡ ಸಿಪಿಐ ಐ.ಎಂ. ಮಠಪತಿ ಹಾಗೂ ಪಿಎಸ್‌ಐ ಎಲ್.ಬಿ. ಮಾಳಿ ಭೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆಯ ಪ್ರಗತಿ ಕುರಿತು ಮಾಹಿತಿ ಪಡೆದುಕೊಂಡರು. ಪೊಲೀಸರು ಆರೋಪಿಗಳ ಬಂಧನಕ್ಕೆ ವಿಶೇಷ ಕಾರ್ಯಾಚರಣೆ ಆರಂಭಿಸಿದ್ದಾರೆ.

Total Views 79
RELATED ARTICLES

Most Popular

Recent Comments

KNN City News
Home
E-Paper