Monday, November 23, 2026
HomeBelagaviಸಾಹುಕಾರ್ ಡಿಸಿಎಂ ಪಕ್ಕಾ.. !

ಸಾಹುಕಾರ್ ಡಿಸಿಎಂ ಪಕ್ಕಾ.. !

ಬೆಳಗಾವಿ
ರಾಜ್ಯ ಸಚಿವ ಸಂಪುಟ ವಿಸ್ತರಣೆ ಸನ್ನಿಹಿತವಾಗಿರುವ ಬೆನ್ನಲ್ಲೇ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡಲಾಗಬಹುದು ಎಂಬ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.
ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಪೋಸ್ಟರ್‌ಗಳಲ್ಲಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಸಚಿವ ಎಂ.ಬಿ. ಪಾಟೀಲ ಅವರಿಗೆ ಡಿಸಿಎಂ ಸ್ಥಾನ ನೀಡಲಾಗುವುದು ಎಂದು ಹರಿ ಬಿಡುತ್ತಿದ್ದಾರೆ. ಈ ಪೋಸ್ಟರ್‌ಗಳು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ರಾಜಕೀಯ ವಲಯದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿವೆ. ಕೆಪಿಸಿಸಿ ಅಧ್ಯಕ್ಷ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದ ಸಚಿವ ಸತೀಶ್ ಜಾರಕಿಹೊಳಿಗೆ ಮುಂದಿನ ಮುಖ್ಯಮಂತ್ರಿ ಎಂದು ಬಿಂಬಿತವಾಗಿರುವ ಅವರಿಗೆ ಡಿಸಿಎಂ ಸಿಕ್ಕರೆ ಅಹಿಂದ ಮತ ಹಾಗೂ ರಾಜ್ಯಾದ್ಯಂತ ಅವರ ಬುದ್ಧ, ಬಸವ. ಅಂಬೇಡ್ಕರ್ ಸಂಘಟನೆಗೆ ಶಕ್ತಿ ಬರುವುದು ಶತ ಶಿದ್ಧ ಎಂದು ರಾಜ್ಯ ರಾಜಕಾರಣದಲ್ಲಿ ವ್ಯಾಪಕ ಚರ್ಚೆ ನಡೆದಿದೆ.
ಮುಖ್ಯಮಂತ್ರಿ ಹುದ್ದೆ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಪ್ರಮುಖ ಆಕಾಂಕ್ಷಿಯಾಗಿದ್ದ ಸತೀಶ್ ಜಾರಕಿಹೊಳಿ ಅವರಿಗೆ ಆ ಎರಡೂ ಹುದ್ದೆಗಳು ಕೈತಪ್ಪಿದ ಹಿನ್ನೆಲೆಯಲ್ಲಿ, ಸಚಿವ ಸಂಪುಟ ವಿಸ್ತರಣೆಯಲ್ಲಿ ಡಿಸಿಎಂ ಸ್ಥಾನ ನೀಡಿ ರಾಜಕೀಯ ಸಮತೋಲನ ಸಾಧಿಸಲು ಕಾಂಗ್ರೆಸ್ ಹೈಕಮಾಂಡ್ ಚಿಂತನೆ ನಡೆಸಿದೆ ಎಂದು ತಿಳಿದು ಬಂದಿದೆ.
ಇನ್ನೊಂದೆಡೆ, ರಾಜ್ಯ ಸಚಿವ ಸಂಪುಟವನ್ನು ದಿನಗಣನೆಯಲ್ಲಿ ವಿಸ್ತರಿಸುವ ಸಾಧ್ಯತೆಗಳಿದ್ದು, ಈ ವೇಳೆ ಹೊಸ ಮುಖಗಳಿಗೆ ಅವಕಾಶ ನೀಡುವ ಜೊತೆಗೆ ಉಪಮುಖ್ಯಮಂತ್ರಿ ಹುದ್ದೆಗಳ ಬಗ್ಗೆಯೂ ಮಹತ್ವದ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಆದರೆ, ಡಿಸಿಎಂ ಹುದ್ದೆ ಕುರಿತು ಕಾಂಗ್ರೆಸ್ ಹೈಕಮಾಂಡ್ ಅಥವಾ ರಾಜ್ಯ ಸರ್ಕಾರದಿಂದ ಯಾವುದೇ ಅಧಿಕೃತ ಪ್ರಕಟಣೆ ಹೊರಬಿದ್ದಿಲ್ಲ. ಹೀಗಾಗಿ, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಪೋಸ್ಟರ್‌ಗಳ ಸತ್ಯಾಸತ್ಯತೆ ಹಾಗೂ ಡಿಸಿಎಂ ಹುದ್ದೆ ಕುರಿತ ಅಂತಿಮ ನಿರ್ಧಾರ ಸಚಿವ ಸಂಪುಟ ವಿಸ್ತರಣೆಯ ನಂತರವೇ ಸ್ಪಷ್ಟವಾಗಲಿದೆ.

Total Views 100
RELATED ARTICLES

Most Popular

Recent Comments

KNN City News
Home
E-Paper