Monday, November 23, 2026
HomeBelagaviಡೆಂಜರ್ ಜೋನ್ ಬಳಿ ಮತ್ತೊಂದು ಅಪಘಾತ: ಅಳವಡಿಸಬೇಕಿದೆ ಬ್ಯಾರಿಕೆಡ್

ಡೆಂಜರ್ ಜೋನ್ ಬಳಿ ಮತ್ತೊಂದು ಅಪಘಾತ: ಅಳವಡಿಸಬೇಕಿದೆ ಬ್ಯಾರಿಕೆಡ್

ಬೆಳಗಾವಿ

ಬೆಳಗಾವಿ ತಾಲೂಕಿನ ಬಡೆಕೋಳ ಮಠದ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಮಳೆಯ ನಡುವೆ ನಿಯಂತ್ರಣ ತಪ್ಪಿದ ಲಾರಿಯೊಂದು ಹೆದ್ದಾರಿಯಲ್ಲೇ ಪಲ್ಟಿ ಹೊಡೆದ ಪರಿಣಾಮ ಪುಣೆ, ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿತು. ಹಿರೇಬಾಗೇವಾಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಪಘಾತಕ್ಕೀಡಾದ ಲಾರಿಯನ್ನು ತೆರವುಗೊಳಿಸುವ ಕಾರ್ಯಾಚರಣೆ ನಡೆಯುತ್ತಿದ್ದು, ಸಂಚಾರವನ್ನು ಸುಗಮಗೊಳಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.
ನಿರಂತರ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ರಸ್ತೆ ಜಾರುವಂತಾಗಿರುವುದು ಅಪಘಾತಕ್ಕೆ ಕಾರಣ ಎಂದು ತಿಳಿದುಬಂದಿದೆ. ಈ ಘಟನೆಯಿಂದ ಹೆದ್ದಾರಿಯಲ್ಲಿ ಕೆಲಕಾಲ ಉದ್ದವಾದ ವಾಹನಗಳ ಸರತಿ ನಿರ್ಮಾಣವಾಗಿ ಪ್ರಯಾಣಿಕರು ಪರದಾಡುವಂತಾಯಿತು.
ಇದೇ ಬಡೆಕೋಳ ಮಠದ ಸಮೀಪದ ಈ ಭಾಗದಲ್ಲಿ ಕಳೆದ ಒಂದು ವಾರದ ಅವಧಿಯಲ್ಲಿ ಈಗಾಗಲೇ ಆರು ರಸ್ತೆ ಅಪಘಾತಗಳು ಸಂಭವಿಸಿವೆ. ಹೀಗಾಗಿ ಈ ಪ್ರದೇಶದಲ್ಲಿ ಸುರಕ್ಷತಾ ಕ್ರಮಗಳನ್ನು ಬಲಪಡಿಸಿ, ಎಚ್ಚರಿಕೆ ಫಲಕಗಳು ಹಾಗೂ ವೇಗ ನಿಯಂತ್ರಣ ವ್ಯವಸ್ಥೆಗಳನ್ನು ಅಳವಡಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

Total Views 131
RELATED ARTICLES

Most Popular

Recent Comments

KNN City News
Home
E-Paper