Monday, November 23, 2026
HomeBelagaviನೂತನ ಸಚಿವರಾಗಿ ಸವದಿ ಅಧಿಕಾರ: ಗಾಣಿಗ ಸಮಾಜದ ಸಂಭ್ರಮ

ನೂತನ ಸಚಿವರಾಗಿ ಸವದಿ ಅಧಿಕಾರ: ಗಾಣಿಗ ಸಮಾಜದ ಸಂಭ್ರಮ

ಬೆಳಗಾವಿ
ರಾಜ್ಯ ಸಚಿವ ಸಂಪುಟಕ್ಕೆ ಅಥಣಿ ಶಾಸಕ ಲಕ್ಷ್ಮಣ ಸವದಿ ಸೇರ್ಪಡೆಯಾಗಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಬೆಳಗಾವಿ ನಗರದಲ್ಲಿ ಅವರ ಅಭಿಮಾನಿಗಳು ಸಂಭ್ರಮಾಚರಣೆ ನಡೆಸಿದರು.
ನಗರದ ಚನ್ನಮ್ಮ ವೃತ್ತದಲ್ಲಿ ಜಮಾಯಿಸಿದ ಅಭಿಮಾನಿಗಳು ಲಕ್ಷ್ಮಣ ಸವದಿ ಪರ ಘೋಷಣೆಗಳನ್ನು ಕೂಗಿ ಹರ್ಷ ವ್ಯಕ್ತಪಡಿಸಿದರು. ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ಸಚಿವ ಸ್ಥಾನ ದೊರೆತಿರುವುದನ್ನು ಸಂಭ್ರಮದಿಂದ ಆಚರಿಸಿದರು.
2023ರ ವಿಧಾನಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದ ಲಕ್ಷ್ಮಣ ಸವದಿ, ಅಥಣಿ ಕ್ಷೇತ್ರದಿಂದ ಭರ್ಜರಿ ಗೆಲುವು ಸಾಧಿಸಿದ್ದರು. ಸಚಿವ ಸ್ಥಾನಕ್ಕಾಗಿ ಕಳೆದ ಹಲವು ತಿಂಗಳಿಂದ ನಿರಂತರ ಪ್ರಯತ್ನ ನಡೆಸಿದ್ದ ಅವರು, ಇದೀಗ ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟದಲ್ಲಿ ಸ್ಥಾನ ಪಡೆಯುವ ಮೂಲಕ ತಮ್ಮ ರಾಜಕೀಯ ಪಯಣದಲ್ಲಿ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದ್ದಾರೆ.
ಸಚಿವ ಸ್ಥಾನ ದೊರೆತ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಗೂ ಸಚಿವ ಸಂಪುಟದಲ್ಲಿ ಮತ್ತಷ್ಟು ಪ್ರಾತಿನಿಧ್ಯ ಸಿಕ್ಕಂತಾಗಿದ್ದು, ಜಿಲ್ಲೆಯ ವಿವಿಧ ಭಾಗಗಳಲ್ಲೂ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸವದಿ ಅಭಿಮಾನಿಗಳು ಸಂಭ್ರಮಾಚರಣೆ ನಡೆಸಿದರು.
ಗಾಣಿಗ ಸಮಾಜದ ಜಿಲ್ಲಾಧ್ಯಕ್ಷ ರಮೇಶ ಉಟಗಿ, ಪ್ರಕಾಶ ಬಾಳೆಕುಂದ್ರಿ, ಕಲ್ಲಪ್ಪ ಗಾಣಿಗೇರ, ಅಶೋಕ ಶಿರೂರ, ಬಸವರಾಜ ಕೊಣ್ಣವರ, ಶಂಕರ ಗಾಣಗಿ, ಮಹಾದೇವ ಸಿದ್ದಣ್ಣವರ, ಶೋಭಾ ಗಾಣಿಗೇರ, ಮಾರುತಿ ಮೂಡಲಗಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Total Views 87
RELATED ARTICLES

Most Popular

Recent Comments

KNN City News
Home
E-Paper