Monday, November 23, 2026
HomeBelagaviಹೆಬ್ಬಾಳ್ಕರ್ ಗೆ ಸಚಿವ ಸ್ಥಾನ ನೀಡುವಂತೆ ಅರಬೆತ್ತಲೆ ಪ್ರತಿಭಟನೆ

ಹೆಬ್ಬಾಳ್ಕರ್ ಗೆ ಸಚಿವ ಸ್ಥಾನ ನೀಡುವಂತೆ ಅರಬೆತ್ತಲೆ ಪ್ರತಿಭಟನೆ

ಬೆಳಗಾವಿ: ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಬಡಸ್ .ಕೆ.ಎಚ್ ಗ್ರಾಮಸ್ಥರು ಹಾಗೂ ಅಭಿಮಾನಿಗಳು ಅರಬೆತ್ತಲೆ ಪ್ರತಿಭಟನೆ ನಡೆಸಿದರು.
ಪಾರಿಶ್ವಾಡ್ ಕ್ರಾಸ್ ನಲ್ಲಿ ರಸ್ತೆ ತಡೆ ನಡೆಸಿ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅವರಿಗೆ ಮಂತ್ರಿ ಸ್ಥಾನ ನೀಡುವಂತೆ ಅರಬೆತ್ತಲೆ ಪ್ರತಿಭಟನೆ ನಡೆಸುವ ಮೂಲಕ ಆಗ್ರಹಿಸಿದರು. ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡುವ ಮೂಲಕ ರಾಜ್ಯದ ಗಮನ ಸೆಳೆಯುವಂತೆ ಮಾಡಿದ್ದಾರೆ. ಅಲ್ಲದೇ ಸಿದ್ದರಾಮಯ್ಯ ಅವರ ಸಂಪುಟದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮಂತ್ರಿಯಾಗಿ ರಾಜ್ಯದ ಮಹಿಳೆ ಹಾಗೂ ಮಕ್ಕಳು ಮೆಚ್ಚುಗೆಪಡುವಂತೆ ಕಾರ್ಯ ಮಾಡಿದ್ದಾರೆ. ಅಲ್ಲದೇ ಸರ್ಕಾರ ಯೋಜನೆಗಳನ್ನು ಮನೆ ಬಾಗಿಲಿಗೆ ತಲುಪುವಂತೆ ಯೋಜನೆಗಳನ್ನು ರೂಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಸ್ತುತ ಸಚಿವ ಸಂಪುಟದಲ್ಲಿ ಜನನಾಯಕಿ ಲಕ್ಷ್ಮೀ ಹೆಬ್ಬಾಳಕರ ಅವರನ್ನು ಮಂತ್ರಿಯಾಗಿ ಮಾಡಲಾಗುತ್ತದೆ ಎಂಬ ನಿರೀಕ್ಷೆ ಹೊಂದಲಾಗಿತ್ತು. ಆದರೆ ಕಾಂಗ್ರೆಸ್ ಪಕ್ಷದ ಮುಖಂಡರು ನಮ್ಮ ನಿರೀಕ್ಷೆಯನ್ನು ಹುಸಿಗೊಳಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮಹಿಳಾ ಖೋಟಾದಡಿ ಲಕ್ಷ್ಮೀ ಹೆಬ್ಬಾಳಕರ ಅವರಿಗೆ ಮಂತ್ರಿ ಸ್ಥಾನ ನೀಡಬೇಕು. ಇಲ್ಲದೇ ಹೋದಲ್ಲಿ ಮುಂಬರುವ ದಿನಗಳಲ್ಲಿ ಪಕ್ಷಕ್ಕೆ ಅಪಾರ ಪ್ರಮಾಣದಲ್ಲಿ ನಷ್ಟವಾಗಲಿದೆ ಎಂದು ಎಚ್ಚರಿಕೆಯನ್ನು ನೀಡಿದರು.
ಪಿಐ ನಂದೀಶ್ವರ ಕುಂಬಾರ , ಪಿಎಸ್ಐ ಅವಿನಾಶ್ ಯರಗೊಪ್ಪ, ಪೇದೆಗಳಾದ ಅಶೋಕ ಮಿಂಡೊಳ್ಳಿ, ಪ್ರಶಾಂತ ಆರೇರ ಸೇರಿದಂತೆ ಹಿರೇಬಾಗೇವಾಡಿ ಠಾಣೆಯ ಪೊಲೀಸರು ಬಂದೂಬಸ್ತ್ ಕಲ್ಪಿಸಿದ್ದರು.

Total Views 63
RELATED ARTICLES

Most Popular

Recent Comments

KNN City News
Home
E-Paper