
ಬೆಳಗಾವಿ
ಇಲ್ಲಿನ ಅನಗೋಳ ಶಿವಶಕ್ತಿ ನಗರದಲ್ಲಿ ಮನೆ ಕಳ್ಳತನ ಮಾಡುತಿದ್ದ ಪ್ರಕರಣವನ್ನು ಭೇದಿಸಿರುವ ಪೊಲೀಸರು, ಇಬ್ಬರು ಆರೋಪಿಗಳನ್ನು ಬಂಧಿಸಿ ಅವರಿಂದ 2.49 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ಜಪ್ತಿ ಮಾಡಿದ್ದಾರೆ.
ತುಷಾರ ಕರೆನ್ನವರ (22) ಹಾಗೂ ಯಲ್ಲಪ್ಪ ಗಜಾನನ ಮುಗಳೆ (28) ಬಂಧಿತರು ಎಂದು ಗುರುತಿಸಲಾಗಿದೆ. ಮನೆ ಕಳ್ಳತನಕ್ಕೆ ಸಂಬಂಧಿಸಿದಂತೆ ತಿಲಕವಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
