
ಬೆಳಗಾವಿ
ಬೈಕ್ ಕಳ್ಳತನ ಮಾಡುತ್ತಿದ್ದ ಆರೋಪದ ಮೇಲೆ ರಾಹುಲ್ ಮುಚಂಡಿ (26) ಎಂಬ ಆರೋಪಿಯನ್ನು ಪೊಲೀಸರ ಬಂಧಿಸಿದ್ದಾರೆ.
ಆರೋಪಿಯಿಂದ ನಿಪ್ಪಾಣಿ ಹಾಗೂ ಮಹಾರಾಷ್ಟ್ರದ ವಿವಿಧ ಜಿಲ್ಲೆಗಳಲ್ಲಿ ಬೈಕ್ ಕಳ್ಳತನ ಮಾಡಿದ್ದ 4.70 ಲಕ್ಷ ರೂ. ಮೌಲ್ಯದ 10 ಬೈಕ್ ಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ನಿಪ್ಪಾಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೈಕ್ ಕಳ್ಳತನ ಪತ್ತೆ ಹಚ್ಚಿದ ಪೊಲೀಸರ ಕ್ರಮಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಶ್ಲಾಘಿಸಿದ್ದಾರೆ.
