Monday, November 23, 2026
HomeBelagaviವಕ್ಕುಂದ, ಹೊಸೂರಲ್ಲಿ ಕಾಣಿಸಿಕೊಂಡ‌ ಚಿರತೆ: ಜನರಲ್ಲಿ ಆತಂಕ

ವಕ್ಕುಂದ, ಹೊಸೂರಲ್ಲಿ ಕಾಣಿಸಿಕೊಂಡ‌ ಚಿರತೆ: ಜನರಲ್ಲಿ ಆತಂಕ

ಬೆಳಗಾವಿ
ಬೆಳಗಾವಿ ಜಿಲ್ಲೆಯಲ್ಲಿ ಚಿರತೆಗಳ ಹಾವಳಿ ಮುಂದುವರಿದಿದ್ದು, ಬೈಲಹೊಂಗಲ ತಾಲೂಕಿನ ವಕ್ಕುಂದ ಹಾಗೂ ಹೊಸೂರು ಭಾಗದಲ್ಲಿ ಕಳೆದ ಎರಡು-ಮೂರು ದಿನಗಳಿಂದ ಚಿರತೆ ಓಡಾಡುತ್ತಿರುವುದು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.
ಚಿರತೆ ಪ್ರತಿದಿನ ಒಂದೊಂದು ಪ್ರದೇಶದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಗ್ರಾಮಗಳ ಸುತ್ತಮುತ್ತ ನಿರಂತರವಾಗಿ ಸಂಚರಿಸುತ್ತಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ. ಹಗಲು, ರಾತ್ರಿ ಎನ್ನದೆ ಚಿರತೆ ಓಡಾಡುತ್ತಿರುವ ಹಿನ್ನೆಲೆಯಲ್ಲಿ ಜಮೀನುಗಳಿಗೆ ತೆರಳುವ ರೈತರು, ಕೂಲಿ ಕಾರ್ಮಿಕರು ಹಾಗೂ ಗ್ರಾಮಸ್ಥರು ಭಯದಲ್ಲೇ ಓಡಾಡುವಂತಾಗಿದೆ.
ವಕ್ಕುಂದ, ಹೊಸೂರು ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಚಿರತೆ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಜನರು ಆತಂಕಗೊಂಡಿದ್ದಾರೆ. ಚಿರತೆ ದಾಳಿಯ ಭೀತಿ ಎದುರಾಗಿರುವುದರಿಂದ ಅರಣ್ಯ ಇಲಾಖೆ ಕೂಡಲೇ ಕಾರ್ಯಾಚರಣೆ ನಡೆಸಿ ಚಿರತೆಯನ್ನು ಸೆರೆ ಹಿಡಿಯಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಚಿರತೆಯ ಚಲನವಲನದ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳು ನಿಗಾ ವಹಿಸಿ, ಅಗತ್ಯ ಕ್ರಮ ಕೈಗೊಳ್ಳಬೇಕು. ಯಾವುದೇ ಅನಾಹುತ ಸಂಭವಿಸುವ ಮುನ್ನವೇ ಚಿರತೆಯನ್ನು ಸೆರೆ ಹಿಡಿಯುವಂತೆ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮನವಿ ಮಾಡಿದ್ದಾರೆ.

Total Views 53
RELATED ARTICLES

Most Popular

Recent Comments

KNN City News
Home
E-Paper