Monday, November 23, 2026
HomeBelagaviತಂದೆ, ಮಗಳ ಭೀಕರವಾಗಿ ಕೊಲೆ ಮಾಡಿದ್ದ ಆರೋಪಿಗಳ ಬಂಧನ

ತಂದೆ, ಮಗಳ ಭೀಕರವಾಗಿ ಕೊಲೆ ಮಾಡಿದ್ದ ಆರೋಪಿಗಳ ಬಂಧನ

ಬೆಳಗಾವಿ
ಕಿತ್ತೂರು ತಾಲೂಕಿನ ಅವರಾದಿ ಗ್ರಾಪಂ ಕಚೇರಿಯಲ್ಲಿ ಆಸ್ತಿ ವಿವಾದದ ಹಿನ್ನೆಲೆಯಲ್ಲಿ ತಂದೆ,‌ಮಗಳನ್ನು ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಕಿತ್ತೂರು ಪೊಲೀಸರು ಬಂಧಿಸಿದ್ದಾರೆ.
ಬಸಪ್ಪ ಕುಂದರಗಿ, ಸಂಗಪ್ಪ ಕುಂದರಗಿ ಹಾಗೂ ಮಡಿವಾಳಪ್ಪ ಕುಂದರಗಿ ಬಂಧಿತ ಆರೋಪಿಗಳು. ಸೆ.16ರಂದು ಬೆಳಗ್ಗೆ 11.15ಕ್ಕೆ ಧಾರವಾಡ ನಿವಾಸಿ ರುದ್ರಪ್ಪ ಕುಂದರಗಿ (67) ಹಾಗೂ ಪುತ್ರಿ ಶಶಿಕಲಾ ಅವರು ಆಸ್ತಿ ನಂಬರ್ 135ರ ಹೆಸರು ದಾಖಲಾತಿ ಅರ್ಜಿ ವಿಚಾರಣೆಗಾಗಿ ಅವರಾದಿ ಗ್ರಾಪಂ ಕಚೇರಿಗೆ ಬಂದಿದ್ದರು. ಈ ವೇಳೆ ಆಸ್ತಿ ವಿಚಾರವಾಗಿ ಆರೋಪಿಗಳು ಗಲಾಟೆ ನಡೆಸಿ, ಕೊಡಗೋಲು ಹಾಗೂ ಕಲ್ಲುಗಳಿಂದ ಇಬ್ಬರ ಮೇಲೂ ಹಲ್ಲೆ ನಡೆಸಿದ ಪರಿಣಾಮ ರುದ್ರಪ್ಪ ಹಾಗೂ ಶಶಿಕಲಾ ಸ್ಥಳದಲ್ಲೇ ಮೃತಪಟ್ಟಿದ್ದರು.
ಗಲಾಟೆ ಬಿಡಿಸಲು ಬಂದ ರಾಹುಲ್ ಎಂಬುವವರ ಮೇಲೆಯೂ ಕೊಡಗೋಲಿನಿಂದ ಹಲ್ಲೆ ನಡೆಸಿ ಗಾಯಗೊಳಿಸಿದ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್, ಹೆಚ್ಚುವರಿ ಎಸ್ಪಿ ಆರ್.ಬಿ. ಬಸರಗಿ ಹಾಗೂ ಬೈಲಹೊಂಗಲ ಡಿವೈಎಸ್‌ಪಿ ಡಾ. ವೀರಯ್ಯ ಹಿರೇಮಠ ಅವರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಲಾಗಿತ್ತು. ಸಿಪಿಐ ಶಿವಾನಂದ ಬಿ. ಗುಡಗನಟ್ಟಿ, ಪಿಎಸ್‌ಐ ಭರತ್ ಎಸ್., ಪಿಎಸ್‌ಐ ಜಿ.ಜಿ. ಹಂಪಣ್ಣವರ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಸೆ.18ರಂದು ಮೂವರು ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Total Views 149
RELATED ARTICLES

Most Popular

Recent Comments

KNN City News
Home
E-Paper