Monday, November 23, 2026
HomeBelagaviಎಸ್‌ಐಆರ್‌ ಪಟ್ಟಿಯಿಂದ ಮುಸ್ಲಿಂ ಮತದಾರರ ಹೆಸರು ಅಳಿಸುವ ಆರೋಪ: ಕಾಂಗ್ರೆಸ್–ಬಿಜೆಪಿ ಕಾರ್ಯಕರ್ತರ ಜಟಾಪಟಿ

ಎಸ್‌ಐಆರ್‌ ಪಟ್ಟಿಯಿಂದ ಮುಸ್ಲಿಂ ಮತದಾರರ ಹೆಸರು ಅಳಿಸುವ ಆರೋಪ: ಕಾಂಗ್ರೆಸ್–ಬಿಜೆಪಿ ಕಾರ್ಯಕರ್ತರ ಜಟಾಪಟಿ

 

ಬೆಳಗಾವಿ
ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಮುಸ್ಲಿಂ ಮತದಾರರನ್ನು ಗುರಿಯಾಗಿಸಿಕೊಂಡು ಒಂದೇ ಬೂತ್‌ನಲ್ಲಿ ಹೆಚ್ಚಿನ ಸಂಖ್ಯೆಯ ಮತದಾರರ ಹೆಸರುಗಳನ್ನು ಅಳಿಸಲು ಪ್ರಯತ್ನಿಸಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಜಟಾಪಟಿ ನಡೆದಿದೆ.

ಬೆಳಗಾವಿ ನಗರದ ವೀರಭದ್ರ ನಗರದ ಉರ್ದು ಶಾಲೆಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಬಿಜೆಪಿ ಮುಖಂಡ ಡಾ. ರವಿ ಪಾಟೀಲ್ ಅವರು ತಮ್ಮ ಆಸ್ಪತ್ರೆಯ ಸಿಬ್ಬಂದಿಯನ್ನು ಬಳಸಿಕೊಂಡು, ತಾವು ಅಧಿಕಾರಿಗಳೆಂದು ಹೇಳಿಕೊಂಡು, 200ಕ್ಕೂ ಅಧಿಕ ಫಾರ್ಮ್ ನಂ.7ಗಳಿಗೆ ಬಿಎಲ್‌ಒ ಅವರಿಂದ ಸಹಿ ಮಾಡಿಸಿಕೊಂಡಿದ್ದಾರೆ ಎಂದು ಕಾಂಗ್ರೆಸ್ ಮುಖಂಡರು ಆರೋಪಿಸಿದ್ದಾರೆ.

ವಿಷಯ ತಿಳಿದು ಸ್ಥಳಕ್ಕೆ ಕಾಂಗ್ರೆಸ್ ಮುಖಂಡ ಅಮನ್ ಸೇಠ್ ಸೇರಿದಂತೆ ಬಿಜೆಪಿ ಮುಖಂಡ ಮುರಗೇಂದ್ರಗೌಡ ಪಾಟೀಲ್ ಕೂಡ ಆಗಮಿಸಿದರು.

ಪರಿಸ್ಥಿತಿ ಕೈಮೀರುವ ಹಂತಕ್ಕೆ ತಲುಪುತ್ತಿದ್ದಂತೆ ಸ್ಥಳದಲ್ಲಿದ್ದ ಪೊಲೀಸರು ಮಧ್ಯಪ್ರವೇಶಿಸಿ ಕೆಲ ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದರು. ಬಳಿಕ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರನ್ನು ಮಾರ್ಕೆಟ್ ಠಾಣೆಗೆ ಕರೆದೊಯ್ದು ಪರಿಸ್ಥಿತಿಯನ್ನು ನಿಯಂತ್ರಿಸಿದರು.

ಎಸ್‌ಐಆರ್‌ ಪ್ರಕ್ರಿಯೆ ಹೆಸರಿನಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸುವ ಪ್ರಯತ್ನ ನಡೆದಿದೆ ಎಂಬ ಆರೋಪ ಇದೀಗ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

Total Views 21
RELATED ARTICLES

Most Popular

Recent Comments

KNN City News
Home
E-Paper