
ಬೆಳಗಾವಿ
ಎಸ್‌ಐಆರ್ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ಡಾ. ರವಿ ಪಾಟೀಲ್ ವಿರುದ್ಧ ಎಫ್‌ಐಆರ್ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.
ಎಸ್ಐಆರ್ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಬೆಳಗಾವಿಯ ಮಾರ್ಕೆಟ್ ಠಾಣೆಯ ಪೊಲೀಸರು, ಬಿಜೆಪಿ ಮುಖಂಡ ಡಾ. ರವಿ ಪಾಟೀಲ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದಾರೆ.
ಇಂದು ಬೆಳಗ್ಗೆ 11 ಗಂಟೆಗೆ ಸಿಪಿಐ ಜೆ.ಎಂ. ಕಾಲಿಮಿರ್ಚಿ ಅವರ ಮುಂದೆ ಹಾಜರಾಗಿ ವಿಚಾರಣೆಗೆ ಸಹಕರಿಸುವಂತೆ ನೋಟಿಸ್‌ನಲ್ಲಿ ಸೂಚಿಸಲಾಗಿದೆ.
ಈಗಾಗಲೇ ಡಾ. ರವಿ ಪಾಟೀಲ್ ಅವರ ಆಸ್ಪತ್ರೆಗೆ ಸಂಬಂಧಿಸಿದ ಇಬ್ಬರು ಸಿಬ್ಬಂದಿಯನ್ನು ಪೊಲೀಸರು ವಿಚಾರಣೆ ನಡೆಸಿದ್ದು, ಪ್ರಕರಣದ ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದಾರೆ.
