Monday, November 23, 2026
HomeBelagaviಸಾರಿಗೆ ಬಸ್ ಗೆ ಹೆಲ್ಮೆಟ್ ನಿಂದ ಜಖಂಗೊಳಿಸಲು ಯತ್ನಿಸಿದ ಸವಾರ

ಸಾರಿಗೆ ಬಸ್ ಗೆ ಹೆಲ್ಮೆಟ್ ನಿಂದ ಜಖಂಗೊಳಿಸಲು ಯತ್ನಿಸಿದ ಸವಾರ

 

ಬೆಳಗಾವಿ
ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್ ಟಚ್ ಆಯಿತು ಎಂಬ ಕಾರಣಕ್ಕೆ ಬಸ್ ಚಾಲಕನನ್ನು ನಡು ರಸ್ತೆಯಲ್ಲೇ ಅಡ್ಡಗಟ್ಟಿ ಹಲ್ಲೆ ನಡೆಸಿದ ಘಟನೆ ಬೆಳಗಾವಿ ಹೊರವಲಯದಲ್ಲಿ ನಡೆದಿದೆ.
ಬೈಕ್ ಸವಾರ ಬಸ್‌ನ್ನು ಅಡ್ಡಗಟ್ಟಿ, ಬೈಕ್‌ನ್ನು ರಸ್ತೆ ಮಧ್ಯೆಯೇ ನಿಲ್ಲಿಸಿ ಚಾಲಕನೊಂದಿಗೆ ವಾಗ್ವಾದ ನಡೆಸಿದ್ದಾನೆ. ಬಳಿಕ ಹೆಲ್ಮೆಟ್‌ನಿಂದ ಬಸ್‌ನ ಗಾಜಿಗೆ ಹೊಡೆದು ಹಾನಿ ಮಾಡಲು ಯತ್ನಿಸಿ, ಚಾಲಕನ ಮೇಲೂ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ.
ಇಷ್ಟೇ ಅಲ್ಲದೆ, ಸ್ಥಳೀಯ ಕೆಲ ಯುವಕರನ್ನು ಕರೆಸಿಕೊಂಡು ಚಾಲಕನ ಮೇಲೆ ಹಲ್ಲೆ ಮುಂದುವರಿಸಲಾಗಿದೆ ಎಂದು ತಿಳಿದುಬಂದಿದೆ. ನಡು ರಸ್ತೆಯಲ್ಲೇ ಚಾಲಕನ ಮೇಲೆ ಹಲ್ಲೆ ನಡೆಯುತ್ತಿದ್ದರೂ, ಸ್ಥಳದಲ್ಲಿದ್ದ ಸಾರ್ವಜನಿಕರು ಹಾಗೂ ವಾಹನ ಸವಾರರು ಮೂಕಪ್ರೇಕ್ಷಕರಾಗಿ ನಿಂತಿದ್ದರೆನ್ನಲಾಗಿದೆ. ಜಗಳ ಬಿಡಿಸಲು ಯಾರೂ ಮುಂದೆ ಬಾರದ ಹಿನ್ನೆಲೆಯಲ್ಲಿ, ಕೊನೆಗೆ ಜೀವ ಉಳಿಸಿಕೊಳ್ಳುವ ಸಲುವಾಗಿ ಚಾಲಕ ಅಲ್ಲಿಂದ ಓಡಿ ಹೋಗಿದ್ದಾನೆ.
ಘಟನೆಯ ಸಂಪೂರ್ಣ ದೃಶ್ಯವನ್ನು ಸ್ಥಳೀಯರೊಬ್ಬರು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದು, ಇದೀಗ ಹಲ್ಲೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದು, ಹಲ್ಲೆ ನಡೆಸಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರಿಂದ ಒತ್ತಾಯ ಕೇಳಿಬಂದಿದೆ.

Total Views 87
RELATED ARTICLES

Most Popular

Recent Comments

KNN City News
Home
E-Paper